Headlines

ಬೆಂಗಳೂರು : ಸಚಿವ ಸಂಪುಟ ಸಭೆಯ ಮಹತ್ವದ ನಿರ್ಣಯಗಳು.

ಬೆಂಗಳೂರು : ಸಚಿವ ಸಂಪುಟ ಸಭೆಯ ಮಹತ್ವದ ನಿರ್ಣಯಗಳು

ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ (ಸೆ,25) ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯ ಪ್ರಮುಖ ನಿರ್ಣಯಗಳು:

· ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಬಯೋ ಸಿಎನ್ ಜಿ ಪ್ಲಾಂಟ್ ಗಳನ್ನು 74.88 ಕೋಟಿ ರೂ. ಪ್ರತಿಘಟಕಕ್ಕೆ 24.96 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತು.

· ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಲಪ್ರಭಾ ಬಲದಂಡೆ ಕಾಲುವೆಯ 56ಎ, 56ಬಿ, 56 ಸಿ, 57 ಮತ್ತು ಇಟಗಿ ವಿತರಣಾ ಕಾಲುವೆಗಳ ಮೊದಲನೇ ಹಂತದ ಆಧುನೀಕರಣ ಕಾಮಗಾರಿಗಳನ್ನು 31.08 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

· ಕೋಲಾರ ಜಿಲ್ಲೆಯ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿತು.

Leave a Reply

Your email address will not be published. Required fields are marked *

Optimized by Optimole
error: Content is protected !!