Headlines

ಹಾವೇರಿ : ನರ್ಸಿಂಗ್ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ.! ಕರೆಮಾಡಿ ನಿರಂತರ ಬೆದರಿಕೆ!

ಸೆಪ್ಟೆಂಬರ್ 13 ರಂದು ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ, ಯುವಕ ಆಕೆಯನ್ನು ಕಾರಿನಲ್ಲಿ ಅಪಹರಿಸಿದ್ದಾನೆ. ಅತ್ಯಾಚಾರದ ಬಗ್ಗೆ ಯಾರಿಗೂ ತಿಳಿಸದಂತೆ ತಡೆಯಲು ಬಾಯಿಗೆ ಬಟ್ಟೆ ಕಟ್ಟಿ ಬಲವಂತವಾಗಿ ಅಪಹರಿಸಿ, ನಂತರ ಅವಳನ್ನು ಕಾಡಿನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆಂದು ವರದಿಯಾಗಿದೆ,

ಅತ್ಯಾಚಾರವೆಸಗಿದ ಬಳಿಕ, ಈ ಪಾಪಿ ವಿದ್ಯಾರ್ಥಿನಿಯ ಮೇಲೆ ಮತ್ತೊಂದು ಅತಿ ಹೇಯ ಕೃತ್ಯಕ್ಕೆ ಮುಂದಾಗಿದ್ದಾರೆ. ಅತ ವಿದ್ಯಾರ್ಥಿನಿಯ ಅಸಹಾಯಕತೆಯ ವಿಡಿಯೋವನ್ನು ಮಾಡಿದ್ದು, ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದಾಗಿ ಭಯಭೀತರಾದ ಸಂತ್ರಸ್ತ ಯುವತಿ ಆರಂಭದಲ್ಲಿ ಮೌನಕ್ಕೆ ಶರಣಾಗಿದ್ದಳು.

ನೀಚರ ಕೃತ್ಯದ ಜೋತೆಗೆ ನಿರಂತರ ಹೆದರಿಕೆಯಿಂದ ನೊಂದ ವಿದ್ಯಾರ್ಥಿನಿ ಕೊನೆಗೂ ಧೈರ್ಯಮಾಡಿ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನನ್ವಯ ಶಿಗ್ಗಾಂ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಹರಣ ಮತ್ತು ಅತ್ಯಾಚಾರ ಎಸಗಿದ ಆರೋಪಿಗಳನ್ನು ಅಭಿಷೇಕ್ ಲಮಾಣಿ ಬಂಧಿಸಲಾಗಿದೆ ಮತ್ತು ಇವನ‌ ಜೋತೆಗಿದ್ದವನ ಬಂಧನಕ್ಕಾಗಿ ಪೋಷಕರು ಮುಂದಾಗಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ತಡಸ ಪೊಲೀಸರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಭಿಷೇಕ್ ಲಮಾಣಿ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿನಿಯನ್ನು ಅಪಹರಿಸಿ ಈ ಕೃತ್ಯ ಎಸಗಿದ ಈ ಘಟನೆ ಹಾವೇರಿ ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಉಂಟಾಗಿದೆ. ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಾನೂನು ಪ್ರಕಾರ ಆರೋಪಿಗಳ ವಿರುದ್ಧ ಸೂಕ್ತ ಮತ್ತು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!