Headlines

ಶಿವಮೊಗ್ಗ: ಮಗಳನ್ನು ಮಚ್ಚಿನಿಂದ ಹತ್ಯೆಗೈದು ತಾನು ನೇಣಿಗೆ ಶರಣಾದ ತಾಯಿ!

ಅಪ್ಪನಿನೆ ಕೊನೆಯದಾಗಿ ವಿಡಿಯೋ ಕಾಲ್‌ ಮಾಡಿದ್ದ ಮಗಳು.!?

ಮೃತ ಶ್ರುತಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಇದಕ್ಕಾಗಿ ವೈದ್ಯರಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರಂತೆ ಎನ್ನಲಾಗಿದೆ. ಶೃತಿ ಆಗಾಗ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದರಂತೆ.ಇದರಿಂದ ಮನೆಯಲ್ಲಿ ಘರ್ಷಣೆ ವಾತಾವರಣ ಉಂಟಾಗುತ್ತಿತ್ತು ಎಂದು ತಿಳಿದುಬಂದಿದ್ದು, ರಾತ್ರಿ ಪಾಳಿಯ ಕೆಲಸಕ್ಕೆ ರಾಮಣ್ಣ ನಾಯಕ ಹೋದ ನಂತರ, ರಾತ್ರಿ ಸುಮಾರು 10:30 ರ ಸುಮಾರಿಗೆ ಮಗಳು ಪೂರ್ವಿಕಾ ತಂದೆಗೆ ವಿಡಿಯೋ ಕಾಲ್ ಮಾಡಿದ್ದಾಳೆ.ಅಪ್ಪ, ಅಮ್ಮ ಹೇಗೇಗೋ ಆಡುತ್ತಿದ್ದಾರೆ, ಬೇಗ ಮನೆಗೆ ಬಾ’ ಎಂದು ಕರೆದಿದ್ದಾಳೆ. ಅದಕ್ಕೆ ರಾಮಣ್ಣ ನಾಯಕ, ‘ಡ್ಯೂಟಿ ಮಾಡ್ತಾ ಇದ್ದೀನಿ ಮಗಳೇ, ಅಮ್ಮ ಸರಿಹೋಗ್ತಾರೆ, ಬೆಳಗ್ಗೆ ಬರ್ತೀನಿ’ ಎಂದು ಸಮಾಧಾನ ಹೇಳಿದ್ದಾರೆ. ದುರದೃಷ್ಟವಶಾತ್, ಇದೇ ತಂದೆ ಮತ್ತು ಮಗಳ ನಡುವಿನ ಕೊನೆಯ ಸಂಭಾಷಣೆಯಾಗಿದೆ. ಮನೆಯಲ್ಲಿ ಇದು ಸಾಮಾನ್ಯ ಎನ್ನುವಂತೆ ಸುಮ್ಮನಾಗಿದ್ದ ರಾಮಣ್ಣ ನಾಯಕ ಅವರಿಗೆ ಬೆಳಗ್ಗೆ ಮಗಳ ಭೀಕರ ಹತ್ಯೆಯ,ಆತ್ಮಹತ್ಯೆಗೆ ಶರಣಾದ ಹೆಂಡತಿಯ ಶವವನ್ನು ನೋಡುವಂತಾಗಿತ್ತು.!

ಘಟನಾ ಸ್ಥಳಕ್ಕೆ ಜಿಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಾದ ಮಿಥುನ್ ಕುಮಾರ್ ಐಪಿಎಸ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 6ನೇ ತರಗತಿ ಓದುತ್ತಿದ್ದ ಮಗಳು ಪೂರ್ವಿಕಾಳ ತಲೆಗೆ ಮಚ್ಚಿನಿಂದ ಹೊಡೆದು ಸಾಯಿಸಿದ ಶ್ರುತಿ, ನಂತರ ಅದೇ ಕೋಣೆಯಲ್ಲಿ ಮಗಳ ಶವದ ಮೇಲೇ ನಿಂತು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಚಿತಪಡಿಸಿದರು. ತಾಯಿ ಶ್ರುತಿಗೆ ಮಾನಸಿಕ ಖಿನ್ನತೆ ಇತ್ತು ಎಂದು ಪತಿ ರಾಮಣ್ಣ ನಾಯಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ನಾಡ ಹಬ್ಬ ವಿಜಯ ದಶಮಿಯ ದಿನದಂದೆ ಹೆತ್ತ ತಾಯಿಯೊಬ್ಬಳು 6ನೇ ತರಗತಿ ಓದುತ್ತಿದ್ದಂತಹ ಮಗಳನ್ನು ಮಚ್ಚಿನಿಂದ ಕೊಲೆಮಾಡಿ ತಾನು ಆತ್ಮಹತ್ಯೆಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ ನಿಜಕ್ಕೂ ಈ ಘಟನೆ ಆಘಾತ ಮತ್ತು ದುಃಖವನ್ನುಂಟು ಮಾಡಿದೆ. ಮಾನಸಿಕ ಖಿನ್ನತೆಗೆ ಒಳಗಾಗಿರುವರ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಇಂತಹ ದುರಂತಗಳು ಸಂಭವಿಸುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡುವಂತೆ ಮಾಡಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!