ಚಂಡಿಗಡ : ಗುಂಡಿಕ್ಕಿಕೊಂಡು ಹರ್ಯಾಣದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ.!
news.ashwasurya.in
Senior Haryana IPS Officer Shoots Himself At His House In Chandigarh
Senior Haryana IPS Officer Shoots Himself At His House In Chandigarh
ಅಶ್ವಸೂರ್ಯ/ಚಂಡಿಗಡ : ಹರ್ಯಾಣದಲ್ಲಿ ದುರ್ಘಟನೆಯೊಂದು ನೆಡೆದಿದ್ದು ಹಿರಿಯ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.! ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸ್ ತನಿಖೆ ಚುರುಕುಗೊಂಡಿದೆ.

2001ನೇ ಬ್ಯಾಚ್ನ ಪೊಲೀಸ್ ಅಧಿಕಾರಿ ಆಗಿರುವ ಇವರು, ರೊಹ್ಟಕ್ನಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಐಜಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಮಧ್ಯಾಹ್ನ 1:30ರ ಸುಮಾರಿಗೆ ಪೂರಣ್ರ ನಿವಾಸದಲ್ಲಿ ಶವ ಪತ್ತೆಯಾಗಿರುವ ಮಾಹಿತಿ ದೊರಕಿದ್ದು, ಸೆಕ್ಟರ್ 11ರ ಠಾಣಾಧಿಕಾರಿಯವರ ತಂಡ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಮೃತದೇಹವು ಪೂರಣ್ರದ್ದೇ ಎಂಬುದು ಧೃಡಪಟ್ಟಿದ್ದು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ತಂಡ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ’ ಎಂದು ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.


