
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಲಕಿನ್ನು ಅತ್ಯಾಚಾರ ಮಾಡಿ ಕೊಲೆ ಎಸಗಿದ ಕಾಮಾಂದನ ಕಾಲಿಗೆ ಗುಂಡೇಟು.
news.ashwasurya.in
ಅಶ್ವಸೂರ್ಯ/ಮೈಸೂರು : ಆರೋಪಿ ಅತ್ಯಾಚಾರ ಎಸಗಿದ ನಂತರ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ.ಆರೋಪಿಯನ್ನು ಮೇಟಗಳ್ಳಿ ಬಳಿ ಪೊಲೀಸರು ಹಿಡಿಯಲು ಮುಂದಾದಾಗ ಕಾನ್ಸ್‌ಟೇಬಲ್ ವೆಂಕಟೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಸಿದ್ದಾನೆ.ತಕ್ಷಣ ಅಪಾಯದ ಅರಿವಾದ ಸಬ್ ಇನ್ಸ್‌ಪೆಕ್ಟರ್ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ತೂರಿಸಿದ್ದಾರೆ.
ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ್ದ ಆರೋಪಿ ಕಾರ್ತಿಕ್ ತಪ್ಪಿಸಿಕೊಳ್ಳುವ ಸಮಯದಲ್ಲಿ ಪೊಲೀಸರ ಮೇಲೆಯೆ ಹಲ್ಲೆಗೆಮುಂದಾಗಿದ್ದಾನೆ ತಕ್ಷಣ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ.

ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಈತ ರಾತ್ರಿ ಟೆಂಟ್‌ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ. ಮೇಟಗಳ್ಳಿ ಬಳಿ ಪೊಲೀಸರು ಆತನನ್ನು ಹಿಡಿಯಲು ಮುಂದಾದಾಗ ಕಾನ್ಸ್‌ಟೇಬಲ್ ವೆಂಕಟೇಶ್ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ಕಾರ್ತಿಕ್ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಆ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆದಾಡುತ್ತಿದ್ದ ಕಾರ್ತಿಕ್ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರೆಲ್ಲರೂ ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.


