ಬೆಂಗಳೂರು : ಪರಪ್ಪನ ಅಗ್ರಹಾರ ಜೈಲ್ನಲ್ಲಿ ರೌಡಿಶೀಟರ್ ಹುಟ್ಟು ಹಬ್ಬ 7 ಜನ ಪೊಲೀಸರ ಅಮಾನತು.

news.ashwasurya.in
ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆ ಪ್ರಕರಣ ಸಂಬಂಧ 7 ಜನ ಪೊಲೀಸ್ ತಲೆ (ಅಮಾನತು) ದಂಡವಾಗಿದೆ.
ಬೆಂಗಳೂರಿನ ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಿನಲ್ಲಿ ತನ್ನ ಸಹಚರರ ಜೊತೆಗೆ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಸೇಬಿನ ಹಾರ ಹಾಕಿಸಿಕೊಂಡು ಸೆರೆಮನೆಯಲ್ಲೆ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.
ಅಲ್ಲದೆ, ಅದನ್ನು ತನ್ನ ಮೊಬೈಲ್ನಲ್ಲಿ ಬರ್ತ್ಡೇ ಪಾರ್ಟಿಯ ವೀಡಿಯೋ, ಪೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದು ಅವುಗಳು ವೈರಲ್ ಆಗಿದ್ದವು.
ಅದೇನೆ ಇರಲಿ ಎಲ್ಲಿಗೆ ಬಂದು ನಿಂತಿದೆ ನಮ್ಮ ನಮ್ಮ ಕಾರಗೃಹದ ವ್ಯವಸ್ಥೆ ಮತ್ತು ರಕ್ಷಣೆ.!
ಇದರಿಂದಾಗಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೋಮ್ಮೇ ಸಾಬೀತಾಗಿತ್ತು. ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟೋರಿಯಸ್ ರೌಡಿಶೀಟರ್ ಗುಬ್ಬಚ್ಚಿ ಸೀನಾ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಅಲ್ಲದೆ, ಮೇಲ್ನೋಟಕ್ಕೆ ದೊಡ್ಡ ಕೇಕು, ಸೇಬಿನ ಹಾರ, ಮೊಬೈಲ್ ಜೈಲು ಒಳಗಡೆ ಹೋಗಲು ಜೈಲಾಧಿಕಾರಿಗಳ ಸಹಕಾರವಿರುವುದು ಕಂಡು ಬಂದಿದ್ದರಿಂದ ಜೈಲು ಎಡಿಜಿಪಿ ದಯಾನಂದ್ ಅವರು ಇಲಾಖಾ ತನಿಖೆಯ ಬಳಿಕ 7 ಜನ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾರಣವೇನು.?
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಶೀಟರ್ ಜನ್ಮದಿನ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಬಿ.ದಯಾನಂದ ಅವರು ಆಂತರಿಕ ತನಿಖೆಗೆ ಆದೇಶ ನೀಡಿದ್ದಾರೆ.
ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ ತನ್ನ ಸಹಚರರ ಜತೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ದಯಾನಂದ್, ಹುಟ್ಟುಹಬ್ಬ ಆಚರಣೆಗೆ ಅವಕಾಶ ನೀಡಿರುವುದು ಮತ್ತು ವಿಡಿಯೊ ಪೋಸ್ಟ್ ಮಾಡಿರುವ ಬಗ್ಗೆ ಆಂತರಿಕ ತನಿಖೆ ನಡೆಸಿ, ವರದಿ ನೀಡುವಂತೆ ಡಿಐಜಿ ದಿವ್ಯಶ್ರೀ ಅವರಿಗೆ ಸೂಚಿಸಿದ್ದಾರೆ.
ಕಾರಾಗೃಹ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಬಿ.ದಯಾನಂದ್

ಪ್ರಕರಣದ ಹಿನ್ನೆಲೆ :
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಶೀಟರ್ ಜನ್ಮದಿನ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಬಿ.ದಯಾನಂದ ಅವರು ಆಂತರಿಕ ತನಿಖೆಗೆ ಆದೇಶ ನೀಡಿದ್ದಾರೆ.
ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ ತನ್ನ ಸಹಚರರ ಜತೆ ಹುಟ್ಟಹಬ್ಬ ಆಚರಿಸಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ದಯಾನಂದ್, ಹುಟ್ಟುಹಬ್ಬ ಆಚರಣೆಗೆ ಅವಕಾಶ ನೀಡಿರುವುದು ಮತ್ತು ವಿಡಿಯೊ ಪೋಸ್ಟ್ ಮಾಡಿರುವ ಬಗ್ಗೆ ಆಂತರಿಕ ತನಿಖೆ ನಡೆಸಿ, ವರದಿ ನೀಡುವಂತೆ ಡಿಐಜಿ ದಿವ್ಯಶ್ರೀ ಅವರಿಗೆ ಸೂಚಿಸಿದ್ದಾರೆ.