ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಪರವಾನಿಗೆ ಇಲ್ಲದ ಗೋದಾಮು ಮತ್ತು ಅಂಗಡಿಗಳ‌ ಮೇಲೆ ಪೋಲಿಸ್ ಇಲಾಖೆ ಯೊಂದಿಗೆ ರೈಡು ಬಿದ್ದ ಜಿಲ್ಲಾಡಳಿತ!!

   ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಪರವಾನಗಿ ಇಲ್ಲದ ಅಂಗಡಿ ಗೋದಾಮುಗಳ ಮೇಲೆ ಪೋಲಿಸ್ ಇಲಾಖೆಯೊಂದಿಗೆ ರೈಡುಬಿದ್ದ ಜಿಲ್ಲಾಡಳಿತ

 ಶಿವಮೊಗ್ಗ : ದಿನಾಂಕ 11-10-2023 ರಂದು ಶ್ರೀ ಸೆಲ್ಮಣಿ, ಐಎಎಸ್, ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ, ಮತ್ತು ಶ್ರೀ ಮಿಥುನ್ ಕುಮಾರ್, ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಸೂಚನೆಯ ಮೇರೆಗೆ, ಶಿವಮೊಗ್ಗ-ಎ ಉಪ ವಿಭಾಗದಲ್ಲಿ ಶ್ರೀ ಬಾಲರಾಜ್, ಡಿವೈಎಸ್ ಪಿ, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ ಶ್ರೀ ಸುರೇಶ್ ಎಂ, ಡಿವೈಎಸ್ ಪಿ, ಭದ್ರಾವತಿ ಉಪ ವಿಭಾಗದಲ್ಲಿ ಶ್ರೀ ನಾಗರಾಜ್, ಡಿವೈಎಸ್ ಪಿ, ಸಾಗರ ಉಪ ವಿಭಾಗದಲ್ಲಿ, ಶ್ರೀ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, ಡಿವೈಎಸ್ ಪಿ, ಶಿಕಾರಿಪುರ ಉಪ ವಿಭಾಗದಲ್ಲಿ ಶ್ರೀ ಶಿವಾನಂದ್ ಮದರಖಂಡಿ, ಡಿವೈಎಸ್ ಪಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಶ್ರೀ  ಗಜಾನನ ವಾಮನ ಸುತಾರ, ಡಿವೈಎಸ್ ಪಿ ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಮೆಸ್ಕಾಂ, ಮಹಾನಗರ ಪಾಲಿಕೆ, ನಗರ ಪಾಲಿಕೆ, ತಾಲ್ಲೂಕು ಪಂಚಾಯತಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿ, ಶಿವಮೊಗ್ಗ-ಎ ಉಪ ವಿಭಾಗದಲ್ಲಿ 03, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ 03, ಭದ್ರಾವತಿ ಉಪ ವಿಭಾಗದಲ್ಲಿ 21, ಸಾಗರ ಉಪ ವಿಭಾಗದಲ್ಲಿ 09, ಶಿಕಾರಿಪುರ ಉಪ ವಿಭಾಗದಲ್ಲಿ 20, ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 07 ಸೇರಿ ಜಿಲ್ಲೆಯಾದ್ಯಂತ ಒಟ್ಟು 63 ಮಳಿಗೆ ಮತ್ತು ಗೋದಾಮುಗಳಲ್ಲಿ ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಮತ್ತು ಪರವಾನಿಗೆ ಪಡೆದಿರುವ ಬಗ್ಗೆ, ಮಳಿಗೆ ಹಾಗೂ ಗೋದಾಮುಗಳಲ್ಲಿ ಎಲ್ಲಾ ಅವಶ್ಯಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವ ಬಗ್ಗೆ ಮತ್ತು ಪಟಾಕಿ ಮಾರಾಟ ಮಾಡಲು ನಿರ್ಮಿಸಿರುವ ಮಳಿಗೆಗಳು ಸುರಕ್ಷತಾ ದೃಷ್ಠಿಯಿಂದ ಸೂಕ್ತವಿರುವ ಬಗ್ಗೆ ಪರಿಶೀಲನೆ ನಡೆಸಿರುತ್ತಾರೆ. 

       ನಿಯಮ ಉಲ್ಲಂಘನೆ  ಮಾಡಿ, ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಮತ್ತು ಮಾರಾಟ ಮಾಡುತ್ತಿದ್ದ ಮಳಿಗೆ / ಗೋದಾಮಿನ ಮಾಲೀಕರ ವಿರುದ್ಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 01, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 01 , ವಿನೋಬನಗರ ಪೊಲೀಸ್ ಠಾಣೆಯಲ್ಲಿ 01 ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ 01 ಪ್ರರಕಣ ಸೇರಿದಂತೆ  ಒಟ್ಟು 04 ಪ್ರಕರಣಗಳನ್ನು ದಾಖಲಿಸಿ, ಅಂದಾಜು 2,000 ಕೆ.ಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಮುಂದುವರೆದಂತೆ…..

   ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ / ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕಃ  12-10-2023 ರಂದು ಪೊಲೀಸ್ ಇಲಾಖೆ ಹಾಗೂ ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಮೆಸ್ಕಾಂ, ಮಹಾನಗರ ಪಾಲಿಕೆ, ನಗರ ಪಾಲಿಕೆ, ತಾಲ್ಲೂಕು ಪಂಚಾಯತಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಮೇಲೆ ದಾಳಿ ಮಾಡಿ,  ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಮತ್ತು ಪರವಾನಿಗೆ ಪಡೆದಿರುವ ಬಗ್ಗೆ, ಅವಶ್ಯಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವ ಬಗ್ಗೆ ಮತ್ತು ಮಳಿಗೆಗಳು ಸುರಕ್ಷತಾ ದೃಷ್ಠಿಯಿಂದ ಸೂಕ್ತವಿರುವ ಬಗ್ಗೆ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆ  ಮಾಡಿದ ಮಳಿಗೆ / ಗೋದಾಮಿನ ಮಾಲೀಕರ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ- 01, ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ- 01, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ- 01 ವಿನೋಬನಗರ ಪೊಲೀಸ್ ಠಾಣೆಯಲ್ಲಿ- 01, ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ- 01 ಪ್ರರಕಣ ಸೇರಿದಂತೆ  ಒಟ್ಟು 05 ಪ್ರಕರಣಗಳನ್ನು ದಾಖಲಿಸಿ, ಅಂದಾಜು ಮೌಲ್ಯ 1,40,00,000/- (ಒಂದು ಕೋಟಿ ನಲತ್ತು ಲಕ್ಷ) ರೂಗಳ, ಅಂದಾಜು 3,000 ಕೆ.ಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸುಧೀರ್ ವಿಧಾತ , ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!