ಕೆಲವು ಪ್ರಕರಣಗಳಿಗೆ ಸಂಭಂದಿಸಿದಂತೆ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದಂತ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮಾನ್ಯ ಪೋಲಿಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಐಪಿಎಸ್ ಅವರು ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು...
2020ನೇ ಸಾಲಿನಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್.ಸಿ ಎಸ್.ಟಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖಾಧಿಕಾರಿಗಳಾದ ಶ್ರೀ ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ, ಹಾಲೀ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ, ಶ್ರೀಮತಿ ಶಾಂತಲಾ, ಪಿಎಸ್ಐ ಹಾಲಿ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ ಮತ್ತು ಸಹಾಯಕ ತನಿಖಾಧಿಕಾರಿಗಳಾದ ಶ್ರೀಮತಿ ಲಕ್ಷ್ಮಿ ಮಹೆಚ್ ಸಿ ಹಾಲಿ ಮಹಿಳಾ ಪೊಲೀಸ್ ಠಾಣೆ ರವರುಗಳು ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣದ ತನಿಖಾಧಿಕಾರಿಗಳಾದ ಶ್ರೀ ಮಂಜುನಾಥ್ ಪಿಎಸ್ಐ, ಹಾಲಿ ತುಂಗಾನಗರ ಪೊಲೀಸ್ ಠಾಣೆ ಮತ್ತು ಸಹಾಯಕ ತನಿಖಾಧಿಕಾರಿಗಳಾದ ಶ್ರೀ ಜಿ. ಬಿ. ನಾಗರಾಜ್, ಹೆಚ್.ಸಿ ಹಾಲಿ ಹೊಳೆಹೊನ್ನೂರು ಪೊಲೀಸ್ ಠಾಣೆ ರವರುಗಳು ಸದರಿ ಪ್ರಕರಣಗಳಲ್ಲಿನ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ.
ಇವರುಗಳ ಈ ಉತ್ತಮವಾದ ಕಾಯ್ರಕ್ಕೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಈ ದಿನ ದಿನಾಂಕಃ 12-10-2023 ರಂದು ಜಿಲ್ಲಾ ಪೊಲೀಸ್ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷಕರು, ಡಿಸಿಆರ್.ಬಿ, ಶಿವಮೊಗ್ಗ ಜಿಲ್ಲೆ ರವರು ಉಪಸ್ಥಿತರಿದ್ದರು.
ಸುಧೀರ್ ವಿಧಾತ ,ಶಿವಮೊಗ್ಗ