ಬೆಂಗಳೂರು : “ಓಂ” ಚಿತ್ರದ “ಆಯಿಲ್ ರಾಜ” ಕೆಜಿಎಫ್ ನ “ಚಾಚಾ” ಹರೀಶ್ ರಾಯ್ ನಿಧನ, ಕ್ಯಾನ್ಸರ್ಗೆ ನಟ ಬಲಿ.

ಖಳನಟ ಹರೀಶ್ ರಾಯ್ ಇನ್ನಿಲ್ಲ
ಅಶ್ವಸೂರ್ಯ/ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಇತಿಹಾಸ ಸೃಷ್ಟಿಸಿದ್ದ ಶಿವರಾಜ್ ಕುಮಾರ್ ಅಭಿನಯದ “ಓಂ” ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ.ಬಾರದೂರಿಗೆ ಪಯಣ ಬೆಳೆಸಿದ್ದಾರೆ.
“ಕೆಜಿಎಫ್ ಚಾಚಾ” ಎಂದೇ ಖ್ಯಾತರಾಗಿದ್ದ ಕನ್ನಡದ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ ಎನ್ನುವ ಸುದ್ದಿ ಅವರ ಅಭಿಮಾನಿಗಳಿಗೆ ಚಿತ್ರರಸಿಕರ ಮನದಲ್ಲಿ ದುಃಖ ಮಡುಗಟ್ಟಿದೆ.ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್ನಲ್ಲಿ ಥೈರಾಯಡ್ ಕ್ಯಾನ್ಸರ್ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.
ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ನಂತರದಲ್ಲಿ ಸಾಕಷ್ಟು ಕನ್ನಡ ಮತ್ತು ತಮಿಳು ಚಿತ್ರದಲ್ಲೂ ನಟಿಸಿದ್ದರು..ಯಶಸ್ವಿ ಚಿತ್ರ ಕೆಜಿಎಫ್ ನಲ್ಲಿ ಅಭಿನಯಿಸಿದ್ದೆ ಕೋನೆಯಾಗಿದೆ.

ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಾವಿಗೆ ಶರಣಾಗಿದ್ದಾರೆ.
ಕನ್ನಡ ಮತ್ತು ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2 ರಲ್ಲಿ ಅಭಿನಯಿಸಿದ್ದಾರೆ.

ಅವರು ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಹಾಯದ ಅಗತ್ಯವಿದ್ದ ಅವರಿಗೆ ಶಿವಣ್ಣ, ಧ್ರುವಸರ್ಜಾ ದರ್ಶನ್, ಯಶ್ ಸೇರಿದಂತೆ ಅನೇಕ ನಟರು ಹಣ ಸಹಾಯ ಮಾಡಿದ್ದರು. ಅವರು 17 ಕೀಮೋಥೆರಪಿ ಇಂಜೆಕ್ಷನ್ ಪಡೆಯಬೇಕಿತ್ತು. ಒಂದು ಇಂಜೆಕ್ಷನ್ ಬೆಲೆ 3.5 ಲಕ್ಷ ರೂ. ಆಗುತ್ತಿತ್ತು. ಹಣ ಸಂಗ್ರಹ ಆಗುತ್ತಿದ್ದಂತೆ ಹಾಸ್ಪಿಟಲ್ಗೆ ಅಡ್ಮಿಟ್ ಆಗಿ ಒಂದು ಇಂಜೆಕ್ಷನ್ ಹಾಕಲಾಗಿತ್ತು. ಆದರೆ ಇಂಜೆಕ್ಷನ್ಗೆ ಸಹಕರಿಸದ ದೇಹದಲ್ಲಿ ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ನಿಶ್ಯಕ್ತಿಯಿಂದ ಐಸಿಯುನಲ್ಲಿ ಸುಮಾರು ದಿನಗಳಿಂದ ಚಿಕಿತ್ಸೆ ನೀಡಲಾಗಿತ್ತು. ಇಂದು ಅವರ ದೇಹ
ಚಿಕಿತ್ಸೆಗೆ ಸ್ಫಂದಿಸದ ಹಿನ್ನೆಲೆಯಲ್ಲಿ ಉಸಿರು ಚೆಲ್ಲಿದ್ದಸರೆ.! ಕ್ಯಾನ್ಸರ್ ಮಾರಿ ಕನ್ನಡದ ಹೆಸರಾಂತ ಖಳನಟನನ್ನು ಬಲಿ ಪಡೆದಿದೆ..


