ಬಂಟ್ವಾಳ: ಬುರ್ಖಾ ಧರಿಸಿ ಬಂದ ಪತ್ನಿ.! ಪತಿಗೆ ಇಟ್ಲು ಮುಹೊರ್ತ.!
news.ashwasurya.in
ಬಂಟ್ವಾಳದ ಬಿಸಿರೋಡಿನಲ್ಲಿರುವ ಟೆಕ್ಸ್ ಟೈಲ್ ಅಂಗಡಿಯೊಂದರಲ್ಲಿ, ಬುರ್ಖಾ ಧರಿಸಿ ಮಾರುವೇಷದಲ್ಲಿ ಬಂದ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾಳೆ.! ಗಂಭೀರವಾಗಿ ಗಾಯಗೊಂಡ ಪತಿಯನ್ನು ಆಸ್ಪತ್ರೆಗೆ ದಾಖಲಿಸಿದರೆ ಆರೋಪಿ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನೆಡೆದಿರಬಹುದೆಂದು ಶಂಕಿಸಿ ತನಿಖೆ ನಡೆಸುತ್ತಿದ್ದಾರೆ....
ಅಶ್ವಸೂರ್ಯ/ಬಂಟ್ವಾಳ : ಬಂಟ್ವಾಳ ನಗರದ ಟೆಕ್ಸ್ ಟೈಲ್ ಅಂಗಡಿಗೆ ಬುರ್ಖಾ ಧರಿಸಿ ಮಾರುವೇಷದಲ್ಲಿ ಬಂದ ಹೆಂಡತಿ ತನ್ನ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿ ರೋಡಿನಲ್ಲಿ ಬುಧವಾರ ಸಂಜೆ ನಡೆದಿದೆ.

ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಬಿಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಮಹಿಳೆ, ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಗಂಡನಿಗೆ ಬುರ್ಖಾ ಧರಿಸಿಕೊಂಡು ಬಂದಿದ್ದ ಪತ್ನಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದರು.
ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಈ ಪ್ರಕರಣ ಬೆಳಕಿಗೆ ಬರುತ್ತಿದ್ದಹಾಗೆ ಆರೋಪಿ ಜ್ಯೋತಿ ಸೋಮಯಾಜಿಯನ್ನು ಬಂಟ್ವಾಳ ಪೋಲೀಸರು ಕೆಲವೆ ಗಂಟೆಗಳಲ್ಲಿ ಹೆಡೆಮುರಿಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ನಗರ ಪೋಲೀಸರು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆಹೆಂಡತಿ ಗಂಡನ ಹತ್ಯೆಗೆ ಮುಂದಾಗಲು ಕಾರಣವೇನು.? ಹಣಕಾಸಿನ ವ್ಯವಹಾರವೇ, ಆಸ್ತಿ ಸಂಬಂಧಿತ ದ್ವೇಷವೇ ಇನ್ನೇನಾದರೂ ಕರಣಗಳಿವೆ?ಎಂದು ಪೊಲೀಸರು ಎಲ್ಲಾ ಆಯಾಮಗಳಲ್ಲಿಯು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆಯನ್ನು ನಡೆಸುತ್ತಿದ್ದಾರೆ.
ಇತ್ತೀಚೆಗೆ ಗಂಡ ಹೆಂಡತಿಯ ನಡುವೆ ಕೌಟುಂಬಿಕ ಕಲಹದ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಕೌಟುಂಬಿಕ ವಿಚಾರಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲು ಕೂಡ ಏರಿದ್ದರು ಎಂದು ತಿಳಿದುಬಂದಿದೆ.


