

ಪೊಲೀಸ್ ಕ್ರೀಡಾ ಕೂಟ 2025: ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ.

ಪ್ರತಿ ವರ್ಷದಂತೆ ಈ ವರ್ಷವೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನ.25 ರಿಂದ 27 ರವರೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ – 2025 ನ್ನು ಆಯೋಜಿಸಲಾಗಿತ್ತು
ನ.25 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ್ದರು.ಕ್ರೀಡಾಕೂಟ ಸತತ ಮೂರು ದಿನಗಳ ಕಾಲ ಯಶಸ್ವಿಯಾಗಿ ನೆರವೇರಿತು ನ.27 ರ ಸಂಜೆ 4 ಗಂಟೆಗೆ ಪೂರ್ವವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಬಿ.ಆರ್. ರವಿಕಾಂತೇಗೌಡ ಇವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅಂತಿಮ ಹಂತದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಗೆದ್ದಂತ ಆಟಗಾರರಿಗೂ ತಂಡಕ್ಕೂ ಬಹುಮಾನ ವಿತರಿಸಿ ಅಭಿನಂದಿಸಿದರು,ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಎ.ಜಿ.ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಎಸ್ ರಮೇಶ್ ಕುಮಾರ್ ಉಪಸ್ಥಿತರಿದ್ದರು…

news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ನ, 27 ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು, ಸದರಿ ಸಮಾರೋಪ ಸಮಾರಂಭಕ್ಕೆ ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೇ ಗೌಡ ಐಪಿಎಸ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಅಂತಿಮ ಹಂತದ ಹಗ್ಗ ಜಗ್ಗಾಟ ಹಾಗೂ ರಿಲೇ ಕ್ರೀಡೆಗಳಿಗೆ ಚಾಲನೆ ನೀಡಿ, ಕ್ರೀಡಾ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

ನಂತರದಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿಜೇತ ಕ್ರೀಡಪಟುಗಳ, ವಿಜೇತ ತಂಡಗಳು ಮತ್ತು ಕ್ರೀಡಾಕೂಟದ ಚಾಂಪಿಯನ್ ಕ್ರೀಡಾಟಪಟುವಿಗೆ ಬಹುಮಾನ ವಿತರಣೆ ಮಾಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಿಥುನ್ ಕುಮಾರ್. ಜಿ ಕೆ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಹಾಗೂ ಎ.ಜಿ.ಕಾರಿಯಪ್ಪ , ಹೆಚ್ಚುವರಿ ಪೊಲೀಸ್ ಅಧೀಕ್ಷಕರು-01 ಶಿವಮೊಗ್ಗ ಜಿಲ್ಲೆ ಮತ್ತು ರಮೇಶ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-02 ಶಿವಮೊಗ್ಗ ಜಿಲ್ಲೆ ರವರು, ಜಿಲ್ಲೆಯ ಉಪವಿಭಾಗಗಳ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕಕರು , ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ-ನಿರೀಕ್ಷಕರು, ಸಿಬ್ಬಂದಿಗಳು, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.






