ಮೈಸೂರು : ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ.!ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ.! ನಾಳೆ ಹುಟ್ಟಿದ ದಿನವೆ ಅಂತ್ಯಕ್ರಿಯೆಗೆ ಸಿದ್ಧತೆ.

ರೋಣೂರು ವೆಂಕಟೇಶಪ್ಪ ದೇವರಾಜ್ (ಜನನ ಡಿಸೆಂಬರ್ “3” 1957) ಪ್ರಬಲ ರಾಜಕಾರಣಿಯಾಗಿದ್ದುಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) 2000 ರಿಂದ ಅಕ್ಟೋಬರ್ 2007 ರವರೆಗೆ ಎರಡು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು KPCC ಯ ಕಾರ್ಯದರ್ಶಿ ಮತ್ತು AICC ಸದಸ್ಯರಾಗಿದ್ದಾರೆ. ಚಿಕ್ಕಪೇಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಅಯ್ಕೆಯಾಗಿ ಸೇವೆ ಸಲ್ಲಿಸಿದ್ದರು.ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ಪರಮಾಪ್ತ ಶಿಷ್ಯರಲ್ಲಿ ಒಬ್ಬರಾಗಿದ್ದರು.
news.ashwasurya.in
ಅಶ್ವಸೂರ್ಯ/ಮೈಸೂರು : ಆರ್ ವಿ ದೇವರಾಜ್ ಅವರಿಗೆ ಹೃದಯಾಘಾತ ಆಗುತ್ತಿದ್ದಂತೆ ಮೊದಲಿಗೆ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೃದಯಾಘಾತದಿಂದ ನಿಧನರಾದ ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಚಾಮುಂಡಿ ತಾಯಿ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಹೋಗಿದ್ದ ಸಂಧರ್ಭದಲ್ಲಿ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
67 ವರ್ಷದ ಆರ್ವಿ ದೇವರಾಜ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದರು. ಇದೇ ಡಿಸೆಂಬರ್ 3ರಂದು ಅವರ ಹುಟ್ಟುಹಬ್ಬವಿತ್ತು. ಹೀಗಾಗಿ ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.
ಈ ವೇಳೆ ಸಂಜೆ 7 ಗಂಟೆ ಸುಮಾರಿನಲ್ಲಿ ಮೈಸೂರಿನಲ್ಲಿ ಆರ್ವಿ ದೇವರಾಜ್ಗೆ ಹೃದಯಾಘಾತ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೃದಯಾಘಾತ ಆಗುತ್ತಿದ್ದಂತೆ ಮೊದಲಿಗೆ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಹಿನ್ನಲೆಯಲ್ಲಿ ಆರ್ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ದೇವರಾಜ್ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಜಯದೇವ ಆಸ್ಪತ್ರೆಯಿಂದ ಇಂದು (ಡಿ,2) ಬೆಳಿಗ್ಗೆ ಬೆಂಗಳೂರಿಗೆ ತರಲಾಗಿದೆ.

ಕನಕಪುರದ ಸೋಮನಹಳ್ಳಿಯಲ್ಲಿ ಹುಟ್ಟುಹಬ್ಬದ ದಿನದಂದೆ ದೇವರಾಜ್ ಅಂತ್ಯಕ್ರಿಯೆ.!
ಕಾಂಗ್ರೆಸ್ ಮಾಜಿ ಶಾಸಕರು ಎಸ್ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದ ಮಾಜಿ ಶಾಸಕ ಆರ್ವಿ ದೇವರಾಜ್ ಅಂತ್ಯಕ್ರಿಯೆಯನ್ನು ಅವರ ಹುಟ್ಟುಹಬ್ಬದ ದಿನವಾದ ಡಿ,3 ರಂದು ನಡೆಸಲು ಕುಟುಂಬಸ್ಥರು ತೀರ್ಮಾನ ತೆಗೆದುಕೊಂಡಿದ್ದಾರೆ.
ಮೈಸೂರಿನ ಜಯದೇವ ಆಸ್ಪತ್ರೆಯಿಂದ ಮೃತದೇಹವನ್ನು ಇಂದು ಬೆಳಗ್ಗೆ ಅಂಬುಲೆನ್ಸ್ ಮೂಲಕ ಕಲಾಸಿಪಾಳ್ಯ ಬಳಿಯ ಮನೆಗೆ ತರಲಾಯಿತು.
ಹತ್ತು ಗಂಟೆಯ ನಂತರ ಜೆಸಿ ರಸ್ತೆಯ ಪಕ್ಷದ ಕಚೇರಿ ಬಳಿ ಸಾರ್ವಜನಿಕ ವ್ಯವಸ್ಥೆಗೆ ಸಿದ್ದತೆ ನಡೆಸಲಾಗಿದೆ. ನಾಳೆ ( ಡಿಸೆಂಬರ್,3) ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂದೇ ಕನಕಪುರ ಸೋಮನಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದಾರೆ.
1957 ರಲ್ಲಿ ಜನಿಸಿದ ಅವರು 2 ಬಾರಿ ಶಾಸಕ, ಒಂದು ಬಾರಿ ಪರಿಷತ್ ಸದಸ್ಯರಾಗಿದ್ದರು. 2004ರಲ್ಲಿ ಆರ್ ವಿದೇವರಾಜ್ ಅವರು ಒಂದು ಬಾರಿ ತಮ್ಮ ಕ್ಷೇತ್ರವನ್ನು ಎಸ್.ಎಂ. ಕೃಷ್ಣ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟು ಸುದ್ದಿಯಾಗಿದ್ದರು. 1989ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು 2 ಬಾರಿ ಕೆಎಸ್ಆರ್ಟಿಸಿ ಅಧ್ಯಕ್ಷ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು. ಆದರೆ ಕೊನೆಯವರೆಗೆ ಸಚಿವ ಸ್ಥಾನ ಒಲಿದಿರಲಿಲ್ಲ. 2018 ಹಾಗೂ 2023ರ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಉದಯ್ ಗರುಡಾಚಾರ್ ವಿರುದ್ಧ ದೇವರಾಜ್ ಸೋತಿದ್ದರು.


