ಹಾಸನ : ನನ್ನ ಶ್ರಮ, ನನ್ನ ಸಂಪಾದನೆ, ನನಗಿಷ್ಟವಾದ ವಾಚ್, ಶೂ ಧರಿಸ್ತೀನಿ: ಡಿಕೆ ಶಿವಕುಮಾರ್ ಖಡಕ್ ಪಂಚ್.
news.ashwasurya.in
ಅಶ್ವಸೂರ್ಯ/ಹಾಸನ : ಯಾರು ಯಾವ ಪ್ಯಾಂಟ್ ಎನು ಧರಿಸುತ್ತಾರೆ ಅಂತ ಕೇಳಲ್ಲ, ವಿಪಕ್ಷ ನಾಯಕರಿಗೆ ಅನುಭವದ ಕೊರತೆ ಇದರ ಅಂತ ವ್ಯಂಗ್ಯವಾಗಿ ಡಿಕೆ ಹೇಳಿದ್ದಾರೆ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುತ್ತೇನೆ ಎಂದು ವಿಪಕ್ಷಗಳ ಆರೋಪಗಳಿಗೆ ಮತ್ತೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರು ನಿಮ್ಮ ವಾಚ್ ವಿಚಾರವಾಗಿ ಟೀಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು.
ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೀನಿ, ಖರೀದಿ ಮಾಡುವ ಶಕ್ತಿ ನನಗಿದೆ. ಯಾರು ಯಾವ ಏನೇನು ಹಾಕುತ್ತಾರೆ, ಯಾವ ವಾಚ್ ಹಾಕುತ್ತಾರೆ, ಯಾವ ಕನ್ನಡಕ ಹಾಕುತ್ತಾರೆ ಎಂದು ನಾನು ಪ್ರಶ್ನೆ ಮಾಡುವುದಿಲ್ಲ. ಇದು ಅವರವರ ವೈಯಕ್ತಿಕ ವಿಚಾರ, ಅವರವರ ಆಸೆಗಳು. ಕೆಲವರು ಒಂದು ಸಾವಿರದ ಶೂ ಧರಿಸಿದ್ರೆ,ಇನ್ನೂ ಕೆಲವರು 1 ಲಕ್ಷದ ಶೂ ಧರಿಸುತ್ತಾರೆ. ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ತೀನಿ, 10 ಲಕ್ಷ ರೂ. ವಾಚನ್ನೂ ಕಟ್ತೀನಿ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ. ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೇ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ.

ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ನನ್ನ ವ್ಯವಹಾರ, ನನ್ನ ಬದುಕು ಏನು ಎಂದು ಬಿಜೆಪಿಯ ಶೇ.90 ರಷ್ಟು ನಾಯಕರಿಗೆ ಗೊತ್ತಿದೆ ಎಂದು ಹೇಳಿದರು.
ಜನಪರ ಕೆಲಸ ಮಾಡಿ ಗುರಿ ಮುಟ್ಟುತ್ತೇವೆ
ಭಾಷಣದ ವೇಳೆ ಮುಂದಿನ ದಿನಗಳಲ್ಲಿ ಹೊಸ ಪರ್ವ ಆರಂಭವಾಗಲಿದೆ. ಹೊಸ ಗುರಿ ಮುಟ್ಟೋಣ ಎಂದು ಹೇಳಿದಿರಿ, ಯಾವಾಗ ಗುರಿ ಮುಟ್ಟುತ್ತೀರಿ ಎಂದು ಕೇಳಿದಾಗ, ʻನಾವು ಜನರ ಪರವಾಗಿ ಕೆಲಸ ಮಾಡಿದಾಗ ಮಾತ್ರವಲ್ಲವೇ ಗುರಿ ಮುಟ್ಟುವುದು. ನಮ್ಮ ಸಾಧನೆಗಳು ಜನರನ್ನು ತಲುಪುತ್ತಿದೆ. ಗ್ಯಾರಂಟಿ ಯೋಜನೆಯಿಂದ ಜನರಿಗೆ 1.11 ಲಕ್ಷ ಕೋಟಿಯಷ್ಟು ಹಣ ಜನರಿಗೆ ತಲುಪುತ್ತಿದ್ದಂತೆ ಗ್ಯಾರಂಟಿ ಸಮಾವೇಶ ಮಾಡಬೇಕು ಎಂದು ನಾನು ಹಾಗೂ ಕೃಷ್ಣ ಭೈರೇಗೌಡ ಅವರು ಚರ್ಚೆ ಮಾಡುತ್ತಿದ್ದೆವು. ಹೀಗೆ ನಮ್ಮ ಹೊಸ ಆಲೋಚನೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು…


