“ಪೊಲೀಸ್ ಹುತಾತ್ಮರ ದಿನಾಚರಣೆ”ಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನುಸಲ್ಲಿಸಲಾಯಿತು

ದಿನಾಂಕ 21-10-2023 ರಂದು ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

 ದಿನಾಂಕ:21-10-1959 ರಂದು ಕೇಂದ್ರ ಮೀಸಲು ಪೊಲೀಸ್‌ ಪಡೆಯ ಡಿ.ಎಸ್‌.ಪಿ. ರವರಾದ ಶ್ರೀ.ಕರಣ್ ಸಿಂಗ್ ನೇತೃತ್ವದ 20 ಜನರ ತಂಡ ಭಾರತ ಮತ್ತು ಚೀನಾ ದೇಶದ ಗಡಿ ಪ್ರದೇಶದ ಲಡಾಕ್ ನ ಹಾಟ್ ಸ್ಟಿಂಗ್ ಎಂಬ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವಾಗ ಚೀನಾ ದೇಶದ ಸೈನಿಕರು ಹಠಾತ್ತನೆ ಆಕ್ರಮಣ ಮಾಡಿ ಶ್ರೀ.ಕರಣ್ ಸಿಂಗ್ ಮತ್ತು ಇತರೆ 09 ಸಿಬ್ಬಂದಿಗಳನ್ನು ಹತ್ಯೆ ಮಾಡಿದ್ದು, ಹುತಾತ್ಮರ ದೇಹಗಳನ್ನು ದಿನಾಂಕ:28-11-1959 ರಂದು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಸಕಲ ಪೊಲೀಸ್‌ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಮಾಡಲಾಗಿರುತ್ತು.


ಪೋಲಿಸ್‌ ಕವಾಯತು ಮೈದಾನ
  ಈ ದಾರುಣ ಘಟನೆಯಲ್ಲಿ ಪ್ರಾಣ ತ್ಯಾಗ ಮಾಡಿದವರ ನೆನಪಿನಲ್ಲಿ ರಾಷ್ಟ್ರಾದ್ಯಾಂತ ಪ್ರತಿ ವರ್ಷ ಅಕ್ಟೋಬರ್ 21 ನೇ ತಾರೀಖಿನಂದು ಪೊಲೀಸ್ ಹುತಾತ್ಮ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿ ವರ್ಷದ 21ನೇ ಅಕ್ಟೊಬರ್ ನಂದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಾಗ, ರಾಷ್ಟ್ರ ರಕ್ಷಣೆ ಮಾಡುವಾಗ ಮತ್ತು ಇತರೆ ಕರ್ತವ್ಯ ನಿರತ ಅವಧಿಯಲ್ಲಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿರವರನ್ನು ಗೌರವ ಪೂರ್ವಕವಾಗಿ ಸ್ಮರಿಸಲಾಗತ್ತಿದೆ.

ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಡಾ|| ಸೆಲ್ವಮಣಿ ಆರ್, ಐಎಎಸ್ ರವರು ವಹಿಸಿದ್ದು, ಮುಖ್ಯ ಆಹ್ವಾನಿತರಾಗಿ ಶ್ರೀ ಲೋಖಂಡೆ ಸ್ನೇಹಲ್ ಸುಧಾಕರ್ ಐ.ಎ.ಎಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಶ್ರೀ ಶಿವಶಂಕರ್ ಈ ಐ.ಎಫ್.ಎಸ್ ಡಿ.ಸಿ.ಎಫ್ ಶಿವಮೊಗ್ಗ ಪ್ರಾದೇಶಿಕ ವಿಭಾಗ ಶಿವಮೊಗ್ಗ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಜಿ ಕೆ ಮಿಥುನ್ ಕುಮಾರ್ ಐಪಿಎಸ್ ರವರು ಮಾತನಾಡಿ
ಹುತಾತ್ಮ ಯೋಧರ ಸೇವೆಯನ್ನು ಸ್ಮರಿಸಿ,
ಸಮಾಜದ ರಕ್ಷಣಾ ಕರ್ತವ್ಯ ಪರಿಪಾಲನೆಯಲ್ಲಿ ದಿನಾಂಕ: 01-09-2022 ರಿಂದ 31-08-2023 ರ ಅವಧಿಯಲ್ಲಿ *ಭಾರತ ದೇಶದಲ್ಲಿ ಒಟ್ಟು 189 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ, ಮೃತಪಟ್ಟಿರುತ್ತಾರೆ, ಇದರಲ್ಲಿ ಕರ್ನಾಟಕ ರಾಜ್ಯದ 16 ಪೊಲೀಸ್ ಅಧಿಕಾರಿ / ಸಿಬ್ಬಂದಿರವರು ಮೃತಪಟ್ಟಿದ್ದು ಇವರುಗಳ ಹೆಸರನ್ನು ವಾಚಿಸಿ, ಹುತಾತ್ಮರ ಸ್ಥಂಬಕ್ಕೆ ಹೂ ಗುಚ್ಛವನ್ನು ಅರ್ಪಿಸುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಬಾಲರಾಜ್ ಪೋಲಿಸ್ ಉಪಾಧೀಕ್ಷಕರು ಶಿವಮೊಗ್ಗ ಎ ಉಪ ವಿಭಾಗ, ಶ್ರೀ ಸುರೇಶ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಬಿ ಉಪ ವಿಭಾಗ, ಶ್ರೀ ಗೋಪಾಲಕೃಷ್ಣ ಟಿ ನಾಯಕ್ ಪೋಲಿಸ್ ಉಪಾಧೀಕ್ಷಕರು ಸಾಗರ ಉಪ ವಿಭಾಗ ಶ್ರೀ ಕೃಷ್ಣಮೂರ್ತಿ ಪೋಲಿಸ್ ಉಪಾಧೀಕ್ಷಕರು ಡಿಎಆರ್ ಶಿವಮೊಗ್ಗ, ಶ್ರೀ ಗಜಾನನ ವಾಮನಸುತರ ಪೋಲಿಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ, ಶ್ರೀ ಶಿವಾನಂದ ಮದರಖಂಡಿ ಪೋಲಿಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗ, ಶ್ರೀ ನಾಗರಾಜ್ ಪೋಲಿಸ್ ಉಪಾಧೀಕ್ಷಕರು ಭದ್ರಾವತಿ ಉಪವಿಭಾಗ ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಧೀರ್ ವಿಧಾತ , ಶಿವಮೊಗ್ಗ

ಶಿವಮೊಗ್ಗ ದಸರಾ ಕಾರ್ಯಕ್ರಮಗಳು

Leave a Reply

Your email address will not be published. Required fields are marked *

Optimized by Optimole
error: Content is protected !!