
ಬೆಳಗಾವಿ : ಹಠಯೋಗಿ ಲೋಕೇಶ್ವರ ಸ್ವಾಮೀಜಿಯು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತು. ಇಂದು ಶಿಕ್ಷೆ ಪ್ರಕಟ.!
news.ashwasurya.in
ಲಾಡ್ಜ್ವೊಂದಕ್ಕೆ ಅಪ್ರಾಪ್ತೆ ಹುಡುಗಿಯನ್ನು ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಸ್ವಾಮೀಜಿಯ ಕೃತ್ಯ ಸಾಬೀತು ಅದ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಗೊಳ್ಳುವ ಸಾಧ್ಯತೆ ಇದೆ…..
ಅಶ್ವಸೂರ್ಯ/ಬೆಳಗಾವಿ : ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಯು ಅಪ್ರಾಪ್ತ ಬಾಲಕಿಯನ್ನು ವಸತಿಗೃಹ ಒಂದಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ. ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದ್ದು, ಅಪರಾಧಿಗೆ ಶಿಕ್ಷೆಯನ್ನು ಶನಿವಾರ ನೀಡಲಿದೆ. ಹಠಯೋಗಿ ಲೋಕೇಶ್ವರ ಸ್ವಾಮೀಜಿ ಉರೂಫ್ ಲೋಕೇಶ್ವರ ಸಾಬಣ್ಣ ಜಂಬಗಿ (30) ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ.

2025 ರ ಮೇ 13ರಂದು ನಿಮ್ಮ ಮನೆಗೆ ಬಿಡುತ್ತೇನೆಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳಿ ಲಾಡ್ಜ್ವೊಂದರಲ್ಲಿ ಬಾಲಕಿ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ.ಈ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ನೀಡಿದ ದೂರಿನ ಮೇಲೆ ಸ್ವಾಮೀಜಿಯನ್ನು ಬಂಧಿಸಿ ದೂರು ದಾಖಲಿಸಿಕೊಳ್ಳಲಾಗಿತ್ತು..

ಈ ಬಗ್ಗೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದಾಖಲಾಧಿಕಾರಿ ರಾಜು ಪ್ರಕರಣ ದಾಖಲಿಸಿ ಕೊಂಡಿದ್ದರು.
ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ ಮುಂದಿನ ತನಿಖೆ ಕೈಗೊಂಡಿದ್ದರು.
ಬಾಲಕಿಯನ್ನು ಅಪಹರಣ ಮಾಡಿದ ಕೃತ್ಯದ ಸಿಸಿ ಕ್ಯಾಮೆರಾ ದೃಶ್ಯಾವಳಿ ಕಂಡುಬಂದಿದೆ. ಮುಂದಿನ ತನಿಖೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ ಶೀಘ್ರಗತಿ ಪೋಟ್ರೊ ನ್ಯಾಯಾಲಯ-01 ಬೆಳಗಾವಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಪ್ರಕರಣದ ವಿಚಾರಣೆ ಮಾಡಿದ್ದರು. ಈ ಬಗ್ಗೆ ಶ್ರೀ ಹಠಯೋಗಿ ಲೋಕೇಶ್ವರ ಮಹಾಸ್ವಾಮಿ ಮೇಲಿನ ಆರೋಪಣೆ ಸಾಬೀತಾಗಿವೆ ಎಂದು ಅವರು ತೀರ್ಪು ನೀಡಿದ್ದು ಶಿಕ್ಷೆಯ ಪ್ರಮಾಣವನ್ನು ಡಿಸೆಂಬರ್ 20 ಕ್ಕೆ ಆದೇಶಿಸಲು ಮುಂದೂಡಲಾಗಿದೆ. ವಿಶೇಷ ಸರಕಾರಿ ಅಭಿಯೋಜಕ ಎಲ್. ವಿ. ಪಾಟೀಲ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ :
2025 ಮೇ 21 ರಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೇಕಳಿ ಗ್ರಾಮದ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಅವರನ್ನು ‘ಪೋಕ್ಸೊ’ ಹಾಗೂ ಅಪಹರಣ ಪ್ರಕರಣದಡಿ ಬಂಧಿಸಲಾಗಿತ್ತು..! ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಈ ಕಾಮಿ ಸ್ವಾಮಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿತ್ತು.
ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯನ್ನು 2025 ರ ಮೇ 13ರಂದು ಅಪಹರಿಸಿಕೊಂಡು ಮಂತ್ರಾಲಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಯ ವಸತಿಗೃಹ ಒಂದರಲ್ಲಿ ನಿರಂತರ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿತ್ತು. 17 ವರ್ಷದ ಸಂತ್ರಸ್ತೆ ಖುದ್ದು ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಮೇ 21ರಂದು ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿತ್ತು ಇತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು…




