

ಗಾನವಿ ಆತ್ಮಹತ್ಯೆಯ ಬೆನ್ನಿಗೆ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ತಾಯಿ ಜಯಂತಿ ( ಗಾನವಿ ಅತ್ತೆ ) ಕೂಡ ಆತ್ಮಹತ್ಯೆಗೆ ಯತ್ನಿಸಿ ನಾಗಪುರದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.! ಸಂಬಂಧಿಕರ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಗಳು ಆತ್ಮಹತ್ಯೆ ಬೆನ್ನಲ್ಲೆ ‘ಸೂರಜ್ಗೆ ಗಂಡಸೇ ಅಲ್ಲ’ ಎಂದು ಗಾನವಿ ಕುಟುಂಬ ಆರೋಪಿಸಿತ್ತು. ಜೊತೆಗೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲು ಮಾಡಿತ್ತು. ಈ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ….

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.! : ನವವಿವಾಹಿತೆ ಗಾನವಿ ಸಾವಿನ ಬೆನ್ನಿಗೆ ಪತಿ ಕೂಡ ಆತ್ಮಹತ್ಯೆಗೆ ಶರಣು.! ಪತಿಯ ತಾಯಿ ಕೂಡ ಆತ್ಮಹತ್ಯೆಗೆ ಯತ್ನ.!
news.ashwasurya.in
ಅಶ್ವಸೂರ್ಯ/ಬೆಂಗಳೂರು : ಕಳೆದ ಅಕ್ಟೋಬರ್ 29ರಂದು ಗಾನವಿ ಮತ್ತು ಸೂರಜ್ ಅವರ ಅದ್ದೂರಿ ಮದುವೆಯಾಗಿತ್ತು. ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್ಗೆಂದು ಹೋಗಿದ್ದರು.ಹನಿಮೂನ್ ಹೊದ ನವ ದಂಪತಿಗಳು ಶ್ರೀಲಂಕಾದಿಂದ ಅರ್ಧಕ್ಕೆ ಬೆಂಗಳೂರಿಗೆ ವಾಪಸ್ಸಾಗಿದ್ದರು, ಬಳಿಕ ಗಾನವಿ ತವರು ಮನೆಯಲ್ಲಿ ನೇಣಿಗೆ ಶರಣಾಗಿದ್ದರು.ಗಾನವಿ ಮನೆಯವರು ಆಕೆಯ ಗಂಡ ಮಾಡಿ ಅತ್ತೆಯ ಮೇಲೆ ಆರೋಪಮಾಡಿ ದೂರು ದಾಖಲಿಸಿದ್ದರು. ಇದೀಗ ನಾಗಪುರದ ತನ್ನ ಮನೆಯಲ್ಲಿ ಗಾನವಿಯ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.!! ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ.!

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಅಕ್ಟೋಬರ್ 29ರಂದು ಗಾನವಿ ಮತ್ತು ಸೂರಜ್ ಮದುವೆಯಾಗಿತ್ತು.ಗಾನವಿ ಪೋಷಕರು ಮಗಳ ಮದುವೆ ಮತ್ತು ರಿಸಪ್ಷನ್ ಅನ್ನು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ಮಾಡಿಕೊಟ್ಟಿದ್ದರು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್ಗೆಂದು ಹೋಗಿದ್ದರು.

ಆದರೆ, ಅಲ್ಲಿ ಅದೇನಾಯ್ತೋ ಅ ದೇವರಿಗೆ ಗೊತ್ತು.? ಹನಿಮೂನ್ ತೆರಳಿದ ದಂಪತಿಗಳು ಅರ್ಧಕ್ಕೆ ಬೆಂಗಳೂರಿಗೆ ವಾಪಸ್ಸಾಗಿದ್ದರು. ಬಳಿಕ ಗಾನವಿ ನೇಣಿಗೆ ಕೊರಳೊಡ್ಡಿದ್ದಳು ಇದನ್ನು ಗಮನಿಸಿದ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು. ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಗಾನವಿಯ ದೊಡ್ಡಮ್ಮ ಮಾತನಾಡಿದ್ದು, ಒಳ್ಳೆಯ ಸಂಬಂಧ ಎಂದು ನಾನೇ ಮದುವೆ ಮಾಡಿಸಲು ಮುಂದಾದೆ. ಅವರು ಹೇಳಿದಂತೆ ಅದ್ಧೂರಿಯಾಗಿ ರಿಸೆಪ್ಷನ್ ಕೂಡ ಮಾಡಿಕೊಟ್ಟೆವು.

ವರದಕ್ಷಿಣೆ, ಒಡವೆಗಾಗಿ ಬೇಡಿಕೆ ಇಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮದುವೆ ಆಗಿ ಒಂದೂವರೆ ತಿಂಗಳಾದರೂ ನಮ್ಮ ಹುಡುಗಿಯನ್ನು ಆತ ಟಚ್ ಕೂಡ ಮಾಡಿಲ್ಲ. ಶ್ರೀಲಂಕಾಗೆ ಹನಿಮೂನ್ಗೆ ಹೋಗಿ ಅರ್ಧದಲ್ಲೇ ಮೊಟಕುಗೊಳಿಸಿ ಬಂದಿದ್ದಾನೆ. ಗಾನವಿಯ ಪತಿ ನಪುಂಸಕ,? ಅವನು ಗಂಡಸೇ ಅಲ್ಲ ಎಂದು ಆಕೆಗೆ ಫಸ್ಟ್ ನೈಟ್ ದಿನವೇ ಗೊತ್ತಾಗಿತ್ತು. ಆತನ ಸಮಸ್ಯೆ ಮುಚ್ಚಿಡಲು ಗಾನವಿಗೆ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿದ್ದರು.!? ಈಗ ಗಾನವಿಯ ಪತಿ ಮತ್ತು ಅತ್ತೆಯ ಮೇಲೆ ದೂರು ದಾಖಲಾಗುತ್ತಿದ್ದಂತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು ಈಗ ಪತ್ನಿ ಆತ್ಮಹತ್ಯೆಯ ಬೆನ್ನಿಗೆ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.!ಈ ಪ್ರಕರಣದ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.?


