

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.!

news.ashwasurya.in
ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಕೆಲಸಕ್ಕೆ (ಪಾರ್ಲರ್ನಲ್ಲಿ) ಹೋಗುತ್ತಿದ್ದ ಮಡದಿಯನ್ನು ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅನುಮಾನಗೊಂಡ ಪತಿ ಮಹಾಶಯ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಯ ನಡುವಿನ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಪತಿಯೆ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದ್ದು ಪತ್ನಿಯ ಕೆಲಸದ ವಿಚಾರವಾಗಿ ಉಂಟಾದ ಅನುಮಾನ ಮತ್ತು ನಿರಂತರ ಜಗಳ ಹೆಂಡತಿಯ ಕೊಲೆಯೊಂದಿಗೆ ಅಂತ್ಯಗೊಂಡಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಗ್ರಹಾರ ಲೇಔಟ್ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 39 ವರ್ಷದ ಆಯೇಷಾ ಸಿದ್ದಿಕಿ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.! ಈ ಪ್ರಕರಣದಲ್ಲಿ ಆಕೆಯ ಪತಿ ಸೈಯ್ಯದ್ ಜಬಿ ಕೊಲೆ ಆರೋಪಿ ಆಗಿದ್ದು, ಕೊಲೆ ಮಾಡಿದ ನಂತರ ತಾನೇ ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಪತ್ನಿ ಮಸಾಜ್ ಪಾರ್ಲರ್ನಲ್ಲಿ ಕೆಲಸ ಮಾಡೋದು ಪತಿಗೆ ಇಷ್ಟ ಇರಲಿಲ್ಲವಂತೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆಯೇಷಾ ಸಿದ್ದಿಕಿ ಮಸಾಜ್ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ವಿಚಾರವನ್ನು ಆಕೆಯ ಪತಿ ಸೈಯ್ಯದ್ ಜಬಿ ವಿರೋಧಿಸುತ್ತಿದ್ದ. ಪತ್ನಿ ಮಸಾಜ್ ಪಾರ್ಲರ್ನಲ್ಲಿ ಕೆಲಸ ಮಾಡಬಾರದು ಎಂದು ಪದೇಪದೇ ಹೇಳುತ್ತಿದ್ದ, ಈ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದನು. ಡಿ.26ರ ರಾತ್ರಿ ಕೂಡ ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಸಾಕಷ್ಟು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಕೋಪದಲ್ಲಿ ಸೈಯ್ಯದ್ ಜಬಿ ಚಾಕುವಿನಿಂದ ಪತ್ನಿಯ ಕುತ್ತಿಗೆಯನ್ನು ಸೀಳಿ ಹತ್ಯೆ ಮಾಡಿದ್ದಾನೆ.
ಪತ್ನಿಗೆ ಮೂರನೇ ಗಂಡ ಪತಿಗೆ ಎರಡನೇ ಹೆಂಡತಿ.!
ಇನ್ನು ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ಮೃತ ಆಯೇಷಾ ಸಿದ್ದಿಕಿಗೆ ಇದು ಮೂರನೇ ಮದುವೆಯಾಗಿದ್ದು, ಆರೋಪಿ ಸೈಯ್ಯದ್ ಜಬಿಗೆ ಇದು ಎರಡನೇ ಮದುವೆಯಾಗಿತ್ತು. ಇಬ್ಬರೂ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಆಯೇಷಾ ಸಿದ್ದಿಕಿ ಸೈಯ್ಯದ್ ಜಬಿಗೆ ಎರಡನೇ ಪತ್ನಿಯಾಗಿದ್ದಳು.! ಸೈಯ್ಯದ್ ಜಬಿ ಆಯೇಷಾ ಸಿದ್ದಿಕಿಗೆ ಮೂರನೇ ಪತಿಯಾಗಿದ್ದನು.!
ವಿವಾಹವಾದ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಅನುಮಾನ ಸುಳಿಗೆ ಸಿಲುಕಿ ನಿತ್ಯ ಜಗಳ ಮತ್ತು ಮನಸ್ತಾಪಗಳು ಹೆಚ್ಚಾಗುತ್ತಿದ್ದವು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಈ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಸೈಯ್ಯದ್ ಜಬಿ ಸ್ವಯಂ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದು, ಮುಂದಿನ ಹಂತದ ತನಿಖೆಯನ್ನು ಕೈಗೊಂಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಾಂಪತ್ಯದ ಕಲಹದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಕುಟುಂಬ ಕಲಹಗಳು ಎಷ್ಟು ಭೀಕರ ಪರಿಣಾಮಕ್ಕೆ ತಲುಪಬಹುದು ಎಂಬುದಕ್ಕೆ ಈ ಘಟನೆ ಉದಹರಣೆಯಾಗಿದೆ.


