
ಮಂಡ್ಯ : ಪೊಲೀಸ್ ಪೇದೆ ಒಬ್ಬರ ಕಿರುಕುಳಕ್ಕೆ ಮನನೊಂದು ಪೊಲೀಸ್ ಪೇದೆ ರಮೇಶ್ ಆತ್ಮಹತ್ಯೆಗೆ ಶರಣು.!
news.ashwasurya.in
ಅಶ್ವಸೂರ್ಯ/ಮಂಡ್ಯ : ಪೇದೆ ರಮೇಶ್ ಆತ್ಮಹತ್ಯೆಗೆ ಹಲವು ಕಾರಣಗಳು ಒಂದೊಂದಾಗಿ ಬಯಲಾಗುತ್ತಿದೆ. ಮೃತರ ಪತ್ನಿ ಪುಷ್ಪಲತಾ ಎಂಬವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪತಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ಪೇದೆಯೊಬ್ಬರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಪ್ರಕರಣ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನೆಡೆದಿದೆ.! ಮದ್ದೂರಿನ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ರಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ರಾತ್ರಿ ಸಂಭವಿಸಿದೆ. ಪೇದೆ ರಮೇಶ್ ನಗರದ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಇರುವ ವಿಶ್ರಾಂತಿ ಗೃಹದ ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ರಾತ್ರಿ 10 ಘಂಟೆಗೆ ಪೊಲೀಸ್ ಪೇದೆಯೊಬ್ಬರು ವಿಶ್ರಾಂತಿ ಗೃಹಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮೃತರ ಪತ್ನಿ ಪುಷ್ಪಲತಾ ಎಂಬವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪೇದೆಯೊಬ್ಬರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ ರಮೇಶ್.!

ಮೃತ ಪೇದೆ ರಮೇಶ್ ಹಾಗೂ ದೂರು ದಾಖಲಾಗಿರುವ ಪೇದೆ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ಠಾಣೆಯ ಪೊಲೀಸ್ ವಸತಿಗೃಹದ ನಿವಾಸಿಗಳಾಗಿದ್ದರು ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್, ಇನ್ಸ್ಪೆಕ್ಟರ್ ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲೆ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಮದ್ದೂರು ಪೊಲೀಸ್ ಠಾಣೆಯ ಮುಂದೆ ಇರಿಸಲಾಗಿತ್ತು. ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು. ಬಳಿಕ ಮೃತರ ಹುಟ್ಟೂರಾದ ದಬಳಗೆರೆ ಗ್ರಾಮಕ್ಕೆ ಶವವನ್ನು ಕೊಂಡೊಯ್ದು, ಸಶಸ್ತ್ರ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ನ್ಯಾಯಾಲಯದ ಕೆಲಸಗಳಲ್ಲಿ ಸಕ್ರಿಯರಾಗಿದ್ದ ರಮೇಶ್ ಅವರ ನಿಧನಕ್ಕೆ ಮದ್ದೂರು ಪಟ್ಟಣದ ವಕೀಲರು ತೀವ್ರ ಸಂತಾಪ ಸೂಚಿಸಿದ್ದಾರೆ. ಗೌರವಾರ್ಥವಾಗಿ ಬುಧವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


