


ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ.

ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ. ಈ ಪಡೆ ಕಾರ್ಯನಿರ್ವಹಣೆಗಾಗಿ ಹೊಸ ವಾಹನವನ್ನು ನೀಡಿದ್ದು, ಈ ವಾಹನವು ಪಡೆಯೊಂದಿಗೆ ಶಾಲಾ-ಕಾಲೇಜು, ಜನ ನಿಭಿಡ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆಗಳಾದ 112 ಮತ್ತು 1098 ಕುರಿತು ಹಾಗೂ ಕಾನೂನುಗಳ ಬಗ್ಗೆಯೂ ಜಾಗೃತಿ ಮೂಡಿಸಲಿದೆ….
ಶಿವಮೊಗ್ಗ : ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ” ಅಕ್ಕ ಪಡೆ “

news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವ ಮತ್ತು ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ “ಅಕ್ಕ ಪಡೆ”ಯು ಕಾರ್ಯ ನಿರ್ವಹಿಸುತ್ತಿರುತ್ತದೆ.

ಡಿ, 09 ರಂದು “ಅಕ್ಕ ಪಡೆ”ಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮೆಡಿಕಲ್ ಕಾಲೇಜ್, ರೈಲ್ವೇ ಸ್ಟೇಷನ್,

ಮಾರ್ಕೇಟ್, ದೇವಸ್ಥಾನ ಹಾಗೂ ಪಾರ್ಕ್ ಗಳ ಬಳಿ ಗಸ್ತು ನಿರ್ವಹಿಸುತ್ತಿದ್ದು, ಗಾಂಧಿ ಪಾರ್ಕ್ ಬಳಿಯಿರುವ ಮಕ್ಕಳಿಗೆ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ 181 ಮಹಿಳಾ ಸಹಾಯವಾಣಿ, 1098 ಮಕ್ಕಳ ಸಹಾಯವಾಣಿ, 112 ತುರ್ತು ಸೇವೆ ಸಹಾಯವಾಣಿಗಳ ಕುರಿತು, ಪೋಕ್ಸೋ ಕಾಯ್ದೆ ಮತ್ತು ಬಾಲ್ಯವಿವಾಹ ಕಾಯ್ದೆ ಬಗ್ಗೆ ಅರಿವು ಮೂಡಿಸಿರುತ್ತಾರೆ.





