ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.!

news.ashwasurya.in
ಅಶ್ವಸೂರ್ಯ/ಬೆಂಗಳೂರು : ವಿಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದರು. ಆದರೆ, ಇದೀಗ ಮಹಿಳೆ ಜತೆ ಅಧಿಕಾರಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಕೂಡ ವೈರಲ್ ಆಗಿದ್ದು ದೊಡ್ಡ ಸದ್ದು ಮಾಡುತ್ತಿದೆ.!
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೊದ ರಾಸಲಿಲೇಯ ಬಗ್ಗೆ ಚರ್ಚೆಯಾಗುತ್ತಿರುವಾಗಲೆ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಯ್, ಗುಡ್ ಮಾರ್ನಿಂಗ್… ಯಾಕೆ ಫೋನ್ ಪಿಕ್ ಮಾಡಿಲ್ಲ. ಲವ್ ಯೂ ಬಂಗಾರಿ, ಸೋ ಸ್ವೀಟ್, ದಿನಾಲೂ ನಿನ್ನ ನೋಡಬೇಕು, ಮುದ್ದು ಮಾಡಬೇಕು … ಎಂದೆಲ್ಲಾ ಮಹಿಳೆ ಜತೆ ಅಶ್ಲೀಲವಾಗಿ ಡಿಜಿಪಿ ಮಾತನಾಡಿರುವುದು ಆಡಿಯೊದಲ್ಲಿದೆ.

ಇದಕ್ಕೂ ಮುನ್ನಾ ವಿಡಿಯೊ ವೈರಲ್ ಆಗುತ್ತಿದ್ದಂತೆ ಹಿರಿಯ ಐಪಿಎಸ್ ಅಧಿಕಾರಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಾಮಚಂದ್ರರಾವ್, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದರು. ನಾನು ಕೂಡ ಆ ವಿಡಿಯೋವನ್ನು ನೋಡಿದ್ದೇನೆ. ಅದು ಎಐ ಬಳಸಿ ಸೃಷ್ಟಿಸಿದ ವಿಡಿಯೊ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ತರಲು ಷಡ್ಯಂತ್ರ ನಡೆದಿದೆ. ಈ ಬಗ್ಗೆ ದೂರು ದಾಖಲಿಸುತ್ತೇನೆ ಎಂದು ಹೇಳಿದ್ದರು.
ಡಿಜಿಪಿ ವಿರುದ್ಧ ದೂರು
ಅಶ್ಲೀಲ ವಿಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಮುಖ್ಯ ಕಾರ್ಯದರ್ಶಿ ಹಾಗೂ ಅಪರ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಳ್ಳಿ ದೂರು ನೀಡಿದ್ದಾರೆ. ಈ ಕೂಡಲೇ ರಾಮಚಂದ್ರರಾವ್ರನ್ನು ಅಮಾನತು ಮಾಡಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ಕುರಿತು ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ.
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಮಚಂದ್ರರಾವ್ ತನ್ನ ಕಚೇರಿಯಲ್ಲೇ ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಅವರು, ನನಗೆ ಈ ವಿಚಾರ ಬೆಳಗ್ಗೆ ಗೊತ್ತಾಯಿತು. ನಾವು ಈ ಪ್ರಕರಣದ ಬಗ್ಗೆ ತನಿಖೆ ಮಾಡಿಸಿ, ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ಉನ್ನತ ಅಧಿಕಾರಿಯಾದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಸಲೀಲೆ ವಿಡಿಯೊ ವೈರಲ್ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.!
ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನುವ ವಿಡಿಯೊ ವೈರಲ್ ಅದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರನ್ನು ಅಮಾನತು
ಮಾಡಿ ಆದೇಶ ಹೊರಡಿಸಲಾಗಿದೆ.
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ವಿಡಿಯೊ ಬಗ್ಗೆ ಸ್ಪಷ್ಟನೆ ನೀಡಲು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ರಾಮಚಂದ್ರ ರಾವ್ ತೆರಳಿದಾಗ ಅವರನ್ನು ಭೇಟಿಯಾಗಲು ಸಚಿವರು ನಿರಾಕರಿಸಿದ್ದರು.
ರಾಸಲೀಲೆ ಪ್ರಕರಣದ ಆರೋಪವನ್ನು ಡಿಜಿಪಿ ರಾಮಚಂದ್ರರಾವ್ ಅಲ್ಲಗಳೆದಿದ್ದು, ಈ ವಿಡಿಯೋ ನೋಡಿ ನನಗೆ ಶಾಕ್ ಆಗಿದೆ. ಇದರಲ್ಲಿರುವ ಮಹಿಳೆ ಯಾರೆಂಬುದು ನನಗೆ ಗೊತ್ತಿಲ್ಲ. ಇದು ತಿರುಚಿದ ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ರಾಮಚಂದ್ರ ರಾವ್ ಹೇಳಿದ್ದರು.


