

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು.
ಪ್ರಾಧಿಕಾರದ ಸ್ವಂತ ನಿಧಿಯಲ್ಲಿ ಗ್ರಾಮ ಸ.ನಂ.25ರಲ್ಲಿ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ಅಭಿವೃದ್ಧಿಗೆ ಅಂದಾಜು ಪಟ್ಟಿ ತಯಾರಿಸಿ ಆಡಳಿತಾತ್ಮಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಅದೇ ರೀತಿ ಗೋಪಿಶೆಟ್ಟಿ ಗ್ರಾಮದಲ್ಲಿ ಒಟ್ಟು 30 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ವಿನ್ಯಾಸ ನಕ್ಷೆ ತಾಂತ್ರಿಕ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.ನಿಧಿಗೆ ಹೋಬಳಿ ಊರಗಡೂರು ಗ್ರಾಮದಲ್ಲಿ 4 ಎಕರೆ ಪ್ರದೇಶದಲ್ಲಿ ವಸತಿ ಸಮುಚ್ಚಯ ನಿರ್ಮಾಣಕ್ಕೆ ಪೂರ್ವಾನುಮತಿ ಕೋರಲಾಗಿದೆ. ಭದ್ರಾವತಿ ತಾಲ್ಲೂಕಿನ ಕಸಬಾ ಗ್ರಾಮ ಸ.ನಂ.118/1 ಸೇರಿದಂತೆ 32 ಎಕರೆ 21 ಗುಂಟೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದ ವಿನ್ಯಾಸ ನಕ್ಷೆಗೂ ತಾಂತ್ರಿಕ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ…..

news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಸೂಡಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ಮುಂದಿನ 25 ವರ್ಷಗಳ ಶಿವಮೊಗ್ಗ ಮತ್ತು ಭದ್ರಾವತಿ ನಗರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಜನಸಂಖ್ಯೆ ವೃದ್ಧಿಯನ್ನು ಆಧಾರವಾಗಿಸಿಕೊಂಡು ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವ ದಿಶೆಯಲ್ಲಿ ಸಮಗ್ರ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ (ಜ,03) ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೂಡಾ ಅಭಿವೃದ್ಧಿ ಯೋಜನೆಯ ಕುರಿತು ಮಾತನಾಡಿದ ಅವರು, ಅಮೃತ್ ಸಿಟಿ ಯೋಜನೆಯಡಿ GIS ಆಧಾರಿತ ಪರಿಷ್ಕೃತ ಮಹಾಯೋಜನೆ–2 (2041) ಗೆ ತಾತ್ಕಾಲಿಕ ಅನುಮೋದನೆಗಾಗಿ ಆಯುಕ್ತಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪ್ರಾಧಿಕಾರದ ಸ್ವಂತ ನಿಧಿಯಲ್ಲಿ ಗ್ರಾಮ ಸ.ನಂ.25ರಲ್ಲಿ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ಅಭಿವೃದ್ಧಿಗೆ ಅಂದಾಜು ಪಟ್ಟಿ ತಯಾರಿಸಿ ಆಡಳಿತಾತ್ಮಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಅದೇ ರೀತಿ ಗೋಪಿಶೆಟ್ಟಿ ಗ್ರಾಮದಲ್ಲಿ ಒಟ್ಟು 30 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ವಿನ್ಯಾಸ ನಕ್ಷೆ ತಾಂತ್ರಿಕ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.ನಿಧಿಗೆ ಹೋಬಳಿ ಊರಗಡೂರು ಗ್ರಾಮದಲ್ಲಿ 4 ಎಕರೆ ಪ್ರದೇಶದಲ್ಲಿ ವಸತಿ ಸಮುಚ್ಚಯ ನಿರ್ಮಾಣಕ್ಕೆ ಪೂರ್ವಾನುಮತಿ ಕೋರಲಾಗಿದೆ. ಭದ್ರಾವತಿ ತಾಲ್ಲೂಕಿನ ಕಸಬಾ ಗ್ರಾಮ ಸ.ನಂ.118/1 ಸೇರಿದಂತೆ 32 ಎಕರೆ 21 ಗುಂಟೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದ ವಿನ್ಯಾಸ ನಕ್ಷೆಗೂ ತಾಂತ್ರಿಕ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸ್ಥಳೀಯ ಯೋಜನಾ ವ್ಯಾಪ್ತಿಯ ದೇವಕಾತಿಕೊಪ್ಪ ಗ್ರಾಮದಲ್ಲಿ (ಶಿವಮೊಗ್ಗ–ರಾಮನಗರ ಮುಖ್ಯರಸ್ತೆ, ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಹತ್ತಿರ) 22 ಎಕರೆ 30 ಗುಂಟೆ ವಿಸ್ತೀರ್ಣದ ಕೆರೆಯನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ಇದೇ ರೀತಿ ಶಿವಮೊಗ್ಗ ತಾಲ್ಲೂಕಿನ ಚನ್ನಮುಂಬಾಪುರ ಗ್ರಾಮದಲ್ಲಿ 10 ಎಕರೆ 23 ಗುಂಟೆ, ಬೊಮ್ಮನಕಟ್ಟೆ ಗ್ರಾಮದಲ್ಲಿ 24 ಎಕರೆ 14 ಗುಂಟೆ, ಆಲ್ಕೊಳ ಗ್ರಾಮದಲ್ಲಿ 1 ಎಕರೆ 2 ಗುಂಟೆ ಹಾಗೂ ಭದ್ರಾವತಿ ತಾಲ್ಲೂಕಿನ ಹೊಸೂರು ಸಿದ್ದಾಪುರ ತಾಂಡಾದಲ್ಲಿ 24 ಎಕರೆ 19 ಗುಂಟೆ ವಿಸ್ತೀರ್ಣದ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.ಹಿಂದಿನ ಲೋಪದೋಷಗಳನ್ನು ಸರಿಪಡಿಸಿ 200 ಅಡಿ ರಸ್ತೆಯನ್ನು ಯಥಾವತ್ತಾಗಿ ಮುಂದುವರಿಸಲಾಗಿದೆ. ಅನುಮೋದನೆಗಾಗಿ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಅನುಮತಿ ದೊರೆತ ತಕ್ಷಣ ಕಾಮಗಾರಿಗಳನ್ನು ಕೈಗೊಂಡು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಲೋಕರ್ಪಣೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದರು.

ಭದ್ರಾವತಿಯ ಕೂಡಲಸಂಗಮ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ನಗರದಲ್ಲಿನ ಆಯ್ದ ಉದ್ಯಾನವನಗಳು ಮತ್ತು ಬಡಾವಣೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಸೂಡಾ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಸೂಡಾ ಸದಸ್ಯರಾದ ಪ್ರವೀಣ್ ಕುಮಾರ್, ಫ್ರಾನ್ಸಿಸ್, ಶ್ರೀಮತಿ ಅರುಣಾ ಗಿರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


