ಮಂಡ್ಯ : ವಿಐಎಸ್ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ : ಹೆಚ್ ಡಿ ಕುಮಾರಸ್ವಾಮಿ.


news.ashwasurya.in
ಅಶ್ವಸೂರ್ಯ/ಮಂಡ್ಯ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಹೆಚ್ಡಿಕೆ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ ಈ ಕಾರ್ಖಾನೆಗೆ ಹೂಡಿಕೆ ಮಾಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ “ವಿಜ್ಞಾತಂ” ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ದೃಢವಾಗಿ ದುಡಿಮೆ ಮಾಡುತ್ತಿದ್ದೇನೆ. ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿ ಅನೇಕ ರೀತಿಯ ತಾಂತ್ರಿಕ ಚರ್ಚೆಗಳು ಹಾಗೂ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಕೆಲಸ ನಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಎಚ್ಎಂಟಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಯೋಜನೆಯಿದೆ ಎಂದರು. ಅಲ್ಲದೆ, ನಾನು ಪ್ರತಿನಿಧಿಸುವ ಮಂಡ್ಯ ಜಿಲ್ಲೆಯಲ್ಲಿ 2 ಕಾರ್ಖಾನೆಗಳನ್ನು ಸ್ಥಾಪಿಸಿ, ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು..


