ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ.
news.ashwasurya.in
ಅಶ್ವಸೂರ್ಯ/ಕುಂದಾಪುರ : ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.!
ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತು
ಭಾನುವಾರ ಬೆಳಿಗ್ಗೆ ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ “ಫಿಟ್ನೆಸ್ ಡಬ್ ಫ್ರೀ” ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.

ಮ್ಯಾರಾಥಾನ್ ಓಟದಲ್ಲಿ ಒಡುವಾಗ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅದಾಗಲೇ ಅವರು ನಿಧನ ಹೊಂದಿದ್ದಾರೆ ಎಂದು ವೈದ್ಯರು ಘೋಷಿಸಿದರು.
ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.


