ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.!

news.ashwasurya.in
ಅಶ್ವಸೂರ್ಯ/ಭದ್ರಾವತಿ: ಯಾಕೊ ಇತ್ತೀಚೆಗೆ ಶಿಕ್ಷಣ ಕ್ಷೇತ್ರದಲ್ಲೂ ಭರ್ಜರಿ ಭ್ರಷ್ಟಾಚಾರ ನೆಡೆಯುತ್ತಿದೆ.ರಾಜ್ಯದ ತುಂಬೆಲ್ಲಾ ಕ್ಷೇತ್ರ ಶಿಕ್ಷಣ ಅಧಿಕಾರಿಗಳಲ್ಲಿ ಸಾಕಷ್ಟು ಮಂದಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೇಲವರಂತು ಶಿಕ್ಷಣದ ಹೆಸರಿನಲ್ಲಿ ಲೂಟಿಗೆ ನಿಂತಿದ್ದಾರೆ.! ಇವರುಗಳ ಹಣದಾಹದ ಕೈಯೊಡ್ಡುವಿಕೆ ನಿರಂತರವಾಗಿ ನೆಡೆಯುತ್ತಿದೆ.!
ಭದ್ರಾವತಿಯಲ್ಲೂ ಆದದ್ದು ಇದೆ ಭ್ರಷ್ಟ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ
ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದಿದ್ದಾರೆ.ಈ ಪ್ರಕರಣದಲ್ಲಿ ಬಿಇಒ ಅವರ ಮಧ್ಯವರ್ತಿಯಾಗಿದ್ದ ಖಾಸಗಿ ವ್ಯಕ್ತಿ ಮಂಜುನಾಥನನ್ನೂ ಲೋಕಾಯುಕ್ತರ ಟೀಮ್ ಬಂಧಿಸಿದೆ.

ಲಿಂಗರಾಜು ಎಂಬ ಶಿಕ್ಷಕರು 2011ರಿಂದ 2023ರವರೆಗೆ ತಮ್ಮ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಹಾಗೂ ಇತರೆ ಭತ್ಯೆಗಳನ್ನು ಮಂಜೂರು ಮಾಡುವಂತೆ ಹಲವು ಬಾರಿ ಭದ್ರಾವತಿ ತಾಲ್ಲೂಕು ಬಿಇಒ ಹಾಗೂ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಜೋತೆಗೆ ಕಛೇರಿಗೆ ಅಲೆದಲೆದು ಸುಸ್ತಾಗಿ ಹೋಗಿದ್ದರು.ಕೇಲಸ ಮಾತ್ರ ಆಗಿರಲಿಲ್ಲ ಇತ್ತೀಚೆಗೆ ಬಿಇಒ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ್ ಇಬ್ಬರೂ ಸೇರಿಕೊಂಡು ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನಿಮಗೆ ಮಾಡಿಕೊಡುವುದಕ್ಕೆ 4 ಲಕ್ಷ ರೂಪಾಯಿ ಲಂಚ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾ, 02,ರಂದು ಲೋಕಾಯುಕ್ತರ ಕಛೇರಿಗೆ ತೆರಳಿ ದೂರು ದಾಖಲಿಸಿದ್ದರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ–1988 (ತಿದ್ದುಪಡಿ–2018)ರ ಕಲಂ 7(ಎ) ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು.
ಮಾ,3 ರ ಸಂಜೆ ಸುಮಾರು 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿತರಾದ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥರನ್ನು ತನಿಖೆ ಸಂಬಂಧ ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ತನಿಖೆಯನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ ಅವರ ಕೈಗೊಂಡಿದ್ದಾರೆ. ಟ್ರ್ಯಾಪ್ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗದ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಬಿ.ಪಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಎನ್. ಮೈಲಾರ ಸೇರಿದಂತೆ ಇತರ ಸಿಬ್ಬಂದಿ ಭಾಗವಹಿಸಿದ್ದರು.
ಒಂದು ಕಡೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಸಡಗರದ ಆಚರಣೆ ಇನ್ನೊಂದು ಕಡೆ ಅವರದೆ ಉಸ್ತುವಾರಿ ತವರು ಜಿಲ್ಲೆಯಲ್ಲಿ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಮವಾಗಿದೆ.


