ಶಿವಮೊಗ್ಗ : ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು.!
ಸತೀಶ್- ಸುನೀತಾ ಎಂಬುವರ ಪುತ್ರಿ ಲಾವಣ್ಯ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಪಿಡಿಯಾಟ್ರಿಕ್ ಪಿಜಿ ಓದುತ್ತಿದ್ದರು. ಆಸ್ಪತ್ರೆಯಿಂದ ಹಾಸ್ಟೆಲ್ ಗೆ ಹೋಗುವಾಗ ಈ ದುರ್ಘಟನೆ ನಡೆದಿದೆ…
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ನೀರು ಸಾಗಿಸುವ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ ಬೋಳ ಗ್ರಾಮದ ಲಾವಣ್ಯಾ (25) ಎಂದು ಗುರುತಿಸಲಾಗಿದೆ ದ್ವಿಚಕ್ರ ವಾಹನದಲ್ಲಿದ್ದ ಮತ್ತೋರ್ವ ಯುವತಿ ಓವೇರಿಯಾ ಎಂಬಾಕೆಗೆ ಗಂಭೀರ ಗಾಯಗೊಂಡಿದ್ದು, ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡುತ್ತಿರುವ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಸಂಬಂಧ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

