ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಸಾವು.!

news.ashwasurya.in
ಅಶ್ವಸೂರ್ಯ/ಚಿತ್ರದುರ್ಗ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ.
ರಿಸರ್ವ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಮೃತಪಟ್ಟವರು.

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ.!
ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್ಐ ಈಶ್ವರ್ ಹಾಗೂ ರಿಸರ್ವ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು ಈ ವೇಳೆ ದುರ್ಘಟನೆ ಸಂಭವಿಸಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಐಮಂಗಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹೆದ್ದಾರಿಯಲ್ಲಿ ನಿಂತ ಟಿಪ್ಪರ್ ಲಾರಿಗೆ ಬೆಳಗಿನ ಜಾವ ಹಿಂಬದಿಯಿಂದ ಹೊಡೆದು ಜೀವ ಕಳೆದುಕೊಂಡ ನಾಲ್ಕು ಮಂದಿ ಪೊಲೀಸ್ ಅಧಿಕಾರಿಗಳಲ್ಲಿ ಪಿಎಸ್ಐ ಸಚಿನ್ ತೀರ್ಥಹಳ್ಳಿ ತಾಲ್ಲೂಕಿನ ಕುಡುವಳ್ಳಿಯವರು.ಬಡತನದಿಂದ ಒಂದು ಉತ್ತಮ ಹಂತಕ್ಕೆ ಬಂದಂತಹ ಯುವಕ ಇತ್ತೀಚೆಗೆ ಮದುವೆಯ ದಿನಾಂಕ ಕೂಡ ನಿಗದಿಯಾಗಿತ್ತು.ಆದರೆ ವಿಧಿ ಆಟವೆ ಬೇರೆಯಾಗಿತ್ತು..


