
ಶಿವಮೊಗ್ಗ : ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕ ಶವಪತ್ತೆ.! ಕೊಲೆ ಶಂಕೆ.!
news.ashwasurya.in
ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆಯಾಗಿದ್ದು ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ….
ಅಶ್ವಸೂರ್ಯ/ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರಂತೆ.

ಶನಿವಾರ ಮನೆಯಿಂದ ಹೊರಟಿದ್ದ ಶಿವಕುಮಾರ್ ಅವರು ಮನೆಯವರಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ, ಭಾನುವಾರ ಬೆಳಿಗ್ಗೆ ಅವರದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಮತ್ತು ಬ್ಯಾಗ್’ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


