ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಚಿಕ್ಕಮಗಳೂರು ಮಹಿಳೆ ಆತ್ಮಹತ್ಯೆಗೆ ಶರಣು.!
news.ashwasurya.in
ಅಶ್ವಸೂರ್ಯ/ಚಿಕ್ಕಮಗಳೂರು: ಶಿವಮೊಗ್ಗ ನಗರದ ಖಾಸಗಿ ನರ್ಸಿಂಗ್ ಹೋಂ ನಲ್ಲಿ ನರ್ಸ್ (Nurse) ಕೆಲಸ ಮಾಡಿಕೊಂಡಿದ್ದ ಮಹಿಳೆ ಹೊಳೆಗೆಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದ್ದು ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಮೂಲದವರಾಗಿದ್ದಾರೆ, ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಮನೆಗೆ ಬಂದಿದ್ದ ರನ್ಯಾ ಮತ್ತೆ ಮುಡುಬ ಬಳಿ ಹೋಗಿ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಸಂಭಂದಿಸಿದಂತೆ ನಿಖರವಾದ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.
ಯಾವುದೇ ಸಮಸ್ಯೆ ಇಲ್ಲದ ರನ್ಯಾ ಅವರು ಆತ್ಮಹತ್ಯೆಗೆ ಶರಣಾಗಲು ಕಾರಣವೇನು.? ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿ ಕಿರುಕುಳಕ್ಕೆ ಒಳಗಾಗಿದ್ದಾರಾ.? ಯಾವುದಾದರೂ ವ್ಯಕ್ತಿಯಿಂದ ತೊಂದರೆ ಅನುಭವಿಸಿದರ ಬಹುದಾ.? ಬಾಳಿ ಬದುಕಬೇಕಾಗಿದ್ದ ಸಮಯದಲ್ಲೇ ತನ್ನ ಕೈಯಾರೆ ಬದುಕು ಅಂತ್ಯ ಗೊಳಿಸಿಕೊಳ್ಳಲು ಕಾರಣವೇನು.? ಈ ಎಲ್ಲಾ ಪ್ರಶ್ನೆಗಳಿಗೆ ಪೊಲೀಸರ ತನಿಖೆಯಿಂದಷ್ಟೆ ಉತ್ತರ ಸಿಗಬೇಕಿದೆ ಎನ್ನುವುದಂತು ಸತ್ಯ.!ಅವರ ಮೊಬೈಲ್ ಕಾಲ್ ಮತ್ತು ಮೇಸೆಜ್ಗಳು ಕೂಡಾ ಅವರ ಆತ್ಮಹತ್ಯೆಗೆ ಕಾರಣವೇನು ಎನ್ನುವುದನ್ನು ಬಯಲು ಮಾಡಬಹುದು.!


