ಬೆಂಗಳೂರು : ನಾಳೆ 3 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ ; ‘ಡಿಜಿಲಾಕರ್’ನಲ್ಲಿ ಅಧಿಕೃತ ಅಂಕಪಟ್ಟಿ ತಕ್ಷಣವೇ ಲಭ್ಯ !
news.ashwasurya.in
ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ದ್ವಿತೀಯ ಪಿಯುಸಿ (Exam-1) ಫಲಿತಾಂಶದ ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9, 2026 (ಗುರುವಾರ) ಮಧ್ಯಾಹ್ನ 3:00 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತಿದೆ. ಅಧಿಕೃತ ವೆಬ್ಸೈಟ್ karresults.nic.in ಅಥವಾ ಕರ್ನಾಟಕ ಒನ್ ಮೊಬೈಲ್ ಆಪ್ನಲ್ಲಿ ವೀಕ್ಷಿಸಬಹುದು.ವಿದ್ಯಾರ್ಥಿಗಳ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ SMS ಅಥವಾ WhatsApp ಮೂಲಕ ಫಲಿತಾಂಶ ಬರಲಿದೆ.
ಡಿಜಿಟಲ್ ಅಂಕಪಟ್ಟಿ: ಈ ಬಾರಿ ಮೊದಲ ಬಾರಿಗೆ ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ (DigiLocker) ಮೂಲಕ ಅಧಿಕೃತ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಮಂಡಳಿಯ ಅಧಿಕೃತ ವೆಬ್ಸೈಟ್ ಅನ್ನು ಗಮನಿಸುತ್ತಿರಲು ಸೂಚಿಸಲಾಗಿದೆ.

ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಸದರಿ ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.ಅಂಕಪಟ್ಟಿಯನ್ನು ಡಿಜಿಲಾಕರ್ನಿಂದ ಡೌನ್ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಈ Video link https://tinyurl.com/mw84wmh9 ಅನ್ನು ಬಳಸಿ ತಿಳಿದುಕೊಳ್ಳಬಹುದು.ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದೆ.
ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.

