BREAKING NEWS
ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್
ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ನಿಗಮ ಮಂಡಳಿಯಲ್ಲಿ ಸ್ಥಾನ!?
ತೀರ್ಥಹಳ್ಳಿ: ತೀರ್ಥಹಳ್ಳಿಯ ಪ್ರಾಮಾಣಿಕ ರಾಜಕಾರಣಿ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರಿಗೆ ನಿಗಮ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಹಾಗೂ ಉಪ ಮುಖ್ಯ ಮಂತ್ರಿ ಚಿಂತನೆ ನಡೆಸಿದ್ದಾರೆ ಎನ್ನುವ ಮಾತು ಬಲವಾಗಿ ಕೇಳಿಬರುತ್ತಿದೆ . ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 231 ಸ್ಥಾನದಲ್ಲಿ ಗೆದ್ದು ಬಹುಮತವನ್ನು ಹೊಂದಿ ಅಧಿಕಾರಕ್ಕೆ ಬಂದಿದ್ದರೂ ಗದ್ದೆ ಗೆಲ್ಲುತ್ತೇವೆ ಎಂದು ಬಲವಾಗಿ ನಂಬಿದ್ದ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿತ್ತು. ಎರಡು ಬಾರಿ ಶಾಸಕರಾಗಿ, ಶಿಕ್ಷಣ ಸಚಿವರಾಗಿಯೂ ಕಾರ್ಯ ನಿರ್ವಹಿಸಿದಂತಹ ಪ್ರಾಮಾಣಿಕ ಹೆಮ್ಮೆಯ ರಾಜಕಾರಣಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಪಕ್ಷದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದು, ರಾಜ್ಯದ ಜನಪ್ರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದ ಹೆಮ್ಮೆಯ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಆಪ್ತ ವಲಯದಲ್ಲಿಯೂ ಗುರುತಿಸಿಕೊಂಡಿರುವ ಕಿಮ್ಮನೆ ಈ ಬಾರಿ ಗೆಲುವು ಸಾಧಿಸಿದ್ದೇ ಆಗಿದ್ದರೆ ಸಂಪುಟದಲ್ಲಿ ಸಚಿವರಾಗುವ ಸಾಧ್ಯತೆಯಿತ್ತು. ಕ್ಷೇತ್ರದಲ್ಲಿದ್ದ ಎಲ್ಲಾ ಭಿನ್ನಮತಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಾದರೂ ಕಿಮ್ಮನೆ ಸೋಲನ್ನು ಅನುಭವಿಸಬೇಕಾಯಿತು.
ಇದೀಗ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ರಾಜ್ಯದ ಹಲವು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಲು ಮುಂದಾಗಿರುವ ಕಾಂಗ್ರೆಸ್ 25 ಹಾಲಿ ಶಾಸಕರೊಂದಿಗೆ ಐದು ಮಂದಿ ಮಾಜಿ ಶಾಸಕರ ಹೆಸರನ್ನೂ ಈಗಾಗಲೇ ಅಂತಿಮಗೊಳಿಸಿದ್ದು ಅದರಲ್ಲಿ ಕಿಮ್ಮನೆ ರತ್ನಾಕರ್ ಅವರ ಹೆಸರೂ ಸೇರಿದೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿದೆ.
ಸುಧೀರ್ ವಿಧಾತ ,ಶಿವಮೊಗ್ಗ