Headlines

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ.

ಪ್ರಮುಖ ಆರೋಪಿಗಳು: ಸಂತೋಷ್, ಅಶ್ವತ್ಥ, ಸುನೀಲ್ ನಜ್ಮೀರ್ ಅಹ್ಮದ್, ಹರ್ಷಿತ್, ವಿನಯ್ ಕುಲಕರ್ಣಿ , ಶಿವಾನಂದ್, ಚನ್ನಕೇಶವ, ಬಸವರಾಜ್ ಮುತ್ತಗಿ , ಕೀರ್ತಿ ಕುಮಾರ್, ವಿನಾಯಕ್, ದಿನೇಶ್, ಶಹನವಾಜ್, ನೂತನ್, ಹರ್ಷಿತ್, ಚಂದ್ರಶೇಖರ ಇಂಡಿ, ಶಿವಾನಂದ್, ವಿಕಾಸ್, ವಾಸುದೇವ, ವಿಕ್ರಂ.

2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ, ಯೋಗೇಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಯಿತು. ಸಿಬಿಐ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡ ನಂತರ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿತು. ಸಾಕ್ಷ್ಯ ನಾಶ, ಬೆದರಿಕೆ ಮತ್ತು ಹತ್ಯೆಯ ಸಂಚು ರೂಪಿಸಿದ ಆರೋಪದ ಮೇಲೆ ನವೆಂಬರ್ 5, 2020 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತು. ವಿನಯ್ ಕುಲಕರ್ಣಿ ಅವರ ಸಂಬಂಧಿ ಚಂದ್ರಶೇಖರ್ ಇಂಡಿ ಸೇರಿದಂತೆ ಇತರ ಕೆಲವರನ್ನೂ ಬಂಧಿಸಲಾಯಿತು. ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿನಯ್ ಕುಲಕರ್ಣಿ ಅವರನ್ನು ಪ್ರಮುಖ ಆರೋಪಿ (A1) ಎಂದು ಉಲ್ಲೇಖಿಸಲಾಯಿತು.
ವಿನಯ್ ಕುಲಕರ್ಣಿ ಅವರು ಸುಮಾರು 9 ತಿಂಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದರು. ಆಗಸ್ಟ್ 2021ರಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತು. ಪ್ರಮುಖ ಷರತ್ತೆಂದರೆ, ನ್ಯಾಯಾಲಯದ ಅನುಮತಿ ಇಲ್ಲದೆ ಅವರು ಧಾರವಾಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಷರತ್ತಿನ ಕಾರಣದಿಂದಲೇ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಅವರು, ಜಿಲ್ಲೆಯ ಗಡಿಯ ಹೊರಗಿದ್ದುಕೊಂಡೇ ಡಿಜಿಟಲ್ ಮತ್ತು ಪರೋಕ್ಷ ಪ್ರಚಾರ ಮಾಡಿ ಭಾರಿ ಬಹುಮತದಿಂದ ಜಯಗಳಿಸಿ ಶಾಸಕರಾದರು.

Leave a Reply

Your email address will not be published. Required fields are marked *

Optimized by Optimole
error: Content is protected !!