
Karnataka SSLC Result 2026: ಇಂದು ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ಲಿಂಕ್.
news.ashwasurya.in
The Karnataka School Examination and Assessment Board (KSEAB) will announce the SSLC Result 2026 today, April 23, 2026, at 12 Noon. Over 9 lakh students can check their results using their registration number on official websites: karresults.nic.in,
ಎಸ್ಎಸ್ಎಲ್ಸಿ -1ರ ಫಲಿತಾಂಶ ಬಿಡುಗಡೆ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದೆ. ಇಂದು ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದ್ದು, ರಿಸಲ್ಟ್ ಚೆಕ್ ಮಾಡುವ ವಿಧಾನ ಹಾಗೂ ವೆಬ್ಸೈಟ್ ಮಾಹಿತಿ ಇಲ್ಲಿ ನೀಡಲಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ…
ಅಶ್ವಸೂರ್ಯ/ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2026) ಇಂದು (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆಯಲ್ಲಿ ತಿಳಿಸಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ (KarnatakaOne Mobile App) ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಇಂದು ಮಧ್ಯಾಹ್ನ 12 ಗಂಟೆಗೆ https://www.digilocker.gov.in/ ಮೂಲಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಂಕಪಟ್ಟಿಯನ್ನು ಡಿಜಿಲಾಕರ್ನಿಂದ ಡೌನ್ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://www.youtube.com/shorts/mu-B4tBwaf8 ಬಳಸಿ ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯು ಸಂಬಂಧಿತ ಶಾಲೆಗಳಿಗೆ ಏಪ್ರಿಲ್ 23 ಮಧ್ಯಾಹ್ನ 12 ಗಂಟೆಗೆ ಲಭ್ಯವಾಗಲಿದೆ ಎಂದು ಪರೀಕ್ಷಾ ಮಂಡಲಿ ತಿಳಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?
ಮೊದಲು ಕೆಎಸ್ಎಇಅಬಿ ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ಕೊಡಿ
ಜಾಲತಾಣದ ಪರದೆ ಮೇಲೆ ಕಾಣುವ SSLC Result 2026 ಆಯ್ಕೆ ಮೇಲೆ ಕ್ಲಿಕ್ ಮಾಡಿ
ಬಳಿಕ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಮಾಹಿತಿ ನಮೂದಿಸಿ
ವಿವರ ಹಾಕಿದ ಬಳಿಕ ಸಲ್ಲಿಸು/ಸಮ್ಮಿಟ್ ಬಟನ್ ಒತ್ತಿ
ಪರದೆ ಮೇಲೆ SSLC 2026 ಅಂಕಪಟ್ಟಿ ಕಾಣಿಸುತ್ತದೆ
ನಿಮ್ಮ ಅಂಕಪಟ್ಟಿಯೇ ಎಂದು ಪರಿಶೀಲಿಸಿಕೊಂಡು ಡೌನ್ಲೋಡ್ ಮಾಡಿಕೊಳ್ಳಬಹುದು.
ಡಿಜಿಲಾಕರ್ ಮತ್ತು ಕರ್ನಾಟಕ ಒನ್ ಅಪ್ಲಿಕೇಶನ್ನಲ್ಲೂ ಸಹ KSEAB 10 ನೇ ತರಗತಿ ಅಂಕಪಟ್ಟಿ 2026 ದೊರೆಯಲಿದೆ.
ರಾಜ್ಯದಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ – 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆದಿತ್ತು. ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 8,12,855 ಮಂದಿ ಹೊಸಬರು, 62,845 ಮಂದಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಇದ್ದರು.


