
ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ.
news.ashwasurya.in
ಅಶ್ವಸೂರ್ಯ/ಶೃಂಗೇರಿ : ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಮತ್ತೆ ಆದೇಶ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ (Srungeri) ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತಗಳನ್ನು ಮರು ಎಣಿಕೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮತ ಮರು ಎಣಿಕೆ ನಡೆಯಲಿದೆ. ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಮರು ಮತ ಎಣಿಕೆ ನಡೆಯಲಿದೆ.

ಚುನಾವಣೆಯಲ್ಲಿ ಅಲ್ಪ ಅಂತರದಿಂದ ಪರಾಜಿತಗೊಂಡಿದ್ದ ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.
ಎರಡು ವಾರಗಳ ಕಾಲಾವಕಾಶ ನೀಡಿ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಮತ್ತೆ ಆದೇಶ ಮಾಡಿದೆ. 201 ಮತಗಳ ಅಂತರದಿಂದ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದರು.
ಮರು ಮತ ಎಣಿಕೆ ಕಾರಣವೇನು.?

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಶೃಂಗೇರಿ ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,811 ಅಂಚೆ ಮತಗಳ ಪೈಕಿ, ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದ 279 ಅಂಚೆ ಮತಗಳನ್ನು ಕಡ್ಡಾಯವಾಗಿ ಮರು ಪರಿಶೀಲಿಸಬೇಕು. ಈ ಸಂದರ್ಭದಲ್ಲಿ ‘ಚುನಾವಣಾ ಅಧಿಕಾರಿಗಳ ಕೈಪಿಡಿ 2023ರ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ. ಕೇವಲ 201 ಮತಗಳ ಅಂತರವಿರುವುದರಿಂದ, ಈ 279 ತಿರಸ್ಕೃತ ಮತಗಳ ಮರುಪರಿಶೀಲನೆಯು ಕ್ಷೇತ್ರದ ಒಟ್ಟಾರೆ ಫಲಿತಾಂಶದ ಮೇಲೆ ದೊಡ್ಡ ಮಟ್ಟದ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತದಾರರು ಈಗ ಮೇ 2 ಅಂಚೆ ಮತಗಳ ಮರು ಎಣಿಕೆಯ ದಿನವನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ.


