ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್ಶಾಸಕ ಟಿ.ಡಿ.ರಾಜೇಗೌಡರಿಗೆ ಗೆಲುವು.
news.ashwasurya.in
ಹೈಕೋರ್ಟ್ ಆದೇಶದ ಮೇರೆಗೆ ಶನಿವಾರ ಚಿಕ್ಕಮಗಳೂರು ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆ ಮಾಡಲಾಗಿದೆ. ಹಾಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ನಡುವೆ ಮರು ಎಣಿಕೆ ಫೈಟ್ ಜೋರಾಗ ಬಹುದು ಎಂದು ಕೊಂಡಿದ್ದರು ಆದರೆ ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.ಅದರಲ್ಲೂ ಕಳೆದ ಬಾರಿಗಿಂತ ಎರಡು ಹೆಚ್ಚಿಗೆ ಮತ ಲಭಿಸಿದೆ….
ಅಶ್ವಸೂರ್ಯ/ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲೂ (Sringeri Postal Ballot recount) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು ಸದ್ಯ ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜು ಮುಂಭಾಗದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.
ಹೈಕೋರ್ಟ್ ಆದೇಶದ ಮೇರೆಗೆ ಶನಿವಾರ ಚಿಕ್ಕಮಗಳೂರು ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆ ಬೆಳಿಗ್ಗೆ 9 ಗಂಟೆಗೆ ಆರಂಭಿಸಲಾಯಿತು. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. 267 ಮತಗಳು ಬಹುತೇಕ ತಿರಸ್ಕೃತ ಬೆನ್ನಲ್ಲೇ ರಾಜೇಗೌಡ ಗೆದ್ದರು ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ಕಶಾಸಕ ರಾಜೇಗೌಡರು ಹೇಳಿದ್ದೇನು?
ಈ ಬಗ್ಗೆ ಕಾಂಗ್ರೆಸ್ ಶಾಸಕ ರಾಜೇಗೌಡ ಪ್ರತಿಕ್ರಿಯಿಸಿ, ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ. ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಮತ ಎಣಿಕೆ ವೇಳೆ ಪ್ರತಿಯೊಂದು ಮತ ಪರಿಶೀಲನೆ ಮಾಡಿದ್ದರೂ ಆರೋಪ ಮಾಡಿದ್ದರು. ಕೆಲವು ಟ್ರಂಕ್ಗಳು ಓಪನ್ ಆಗಿತ್ತು, ಅದಕ್ಕೆ ನಾನು ಟ್ಯಾಂಪರಿಂಗ್ ಮಾಡಿರಬಹುದು ಎಂದು ಆರೋಪ ಮಾಡಿದ್ದೆ. ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಎಂದಿದ್ದರು. ಹಾಗಾಗಿ ನನಗೆ ಅನುಮಾನ ಬಂದಿತ್ತು. 12 ಅಂಚೆ ಮತಗಳು ನಾಪತ್ತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಅಂಚೆ ಮತದ ಮರು ಎಣಿಕೆಗೆ ಕಾರಣವೇನು.?
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಶೃಂಗೇರಿ ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,811 ಅಂಚೆ ಮತಗಳ ಪೈಕಿ, ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದ 279 ಅಂಚೆ ಮತಗಳನ್ನು ಕಡ್ಡಾಯವಾಗಿ ಮರುಪರಿಶೀಲಿಸಬೇಕು. ಈ ಸಂದರ್ಭದಲ್ಲಿ ‘ಚುನಾವಣಾ ಅಧಿಕಾರಿಗಳ ಕೈಪಿಡಿ 2023ರ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು. ಆದರೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ ಮತ್ತೆ ಜೀವರಾಜ್ ಅವರಿಗೆ ಮುಖಭಂಗವಾಗಿದೆ.


