ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್.
news.ashwasurya.in
ಅಶ್ವಸೂರ್ಯ/ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ಶ್ರೀಮಂತ ಯುವಕರನ್ನು ಪರಿಚಯಿಸಿಕೊಂಡು ಅವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆರೋಪಿ ಯುವತಿಯರು, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದರು.ದೂರು ದಾಖಲಾಗುತ್ತಿದ್ದಂತೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ, ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಬಂಧಿತ ಆರೋಪಿಗಳು, ಮೊದಲು ಶ್ರೀಮಂತ ಹಿನ್ನೆಲೆಯುಳ್ಳ ಯುವಕರನ್ನು ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್ನ ಸದಸ್ಯೆ ಪಂಚಮಿ ಇದೆ ಹಾದಿಯಲ್ಲಿ ಶ್ರೀಮಂತ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ ಹರಿಹರ ತಾಲೂಕಿನ ಶಿವನಹಳ್ಳಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಜಗದೀಶ, ಗಂಗಾ ಮಲ್ಲೇಶ್ ನಾಯ್ಕ, ವೆಂಕಟೇಶ್ ಹಾಗೂ ಮತ್ತೊಬ್ಬ ಆರೋಪಿ ಧಾವಿಸಿ ಬಂದು ಯುವಕನ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಗ್ಯಾಂಗ್ನ ಐವರನ್ನು ಜೈಲಿಗಟ್ಟಿದ್ದಾರೆ. ಈ ತಂಡ ಇನ್ನೂ ಹಲವು ಯುವಕರಿಗೆ ವಂಚಿಸಿರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ.

