ಶಿವಮೊಗ್ಗ : ಜೂನ್ 1ರಂದು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಚಾಲನೆ ; ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ : ಸಚಿವ ಮಧು ಬಂಗಾರಪ್ಪ..
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದಲ್ಲಿ ಜೂನ್ 1ರಂದು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ ಶಿಕ್ಷಣ ಇಲಾಖೆಯ ಮಹತ್ವದ ಸಾಧನೆ ಎಂದು ಹೇಳಿದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಹಲವು ಬದಲಾವಣೆಗಳನ್ನು ತರಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣವೂ ಏರಿಕೆಯಾಗಿದೆ. ಪಿಯುಸಿ ಪರೀಕ್ಷೆಯ ಎರಡನೇ ಫಲಿತಾಂಶದಲ್ಲಿ ಶೇ.92ರಷ್ಟು ಸಾಧನೆ ಕಂಡಿದ್ದೇವೆ ಎಂದು ಸಚಿವರು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಕರ್ನಾಟಕದ ಮಾದರಿಯನ್ನು ಇತರೆ ರಾಜ್ಯಗಳೂ ಗಮನಿಸುತ್ತಿವೆ ಎಂದು ಮಧು ಬಂಗಾರಪ್ಪ ಹೇಳಿದರು.


