ಹಾಸನ : ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ ಉಪತಹಶೀಲ್ದಾರ್ ನೆಣಿಗೆ ಶರಣು.!
news.ashwasurya.in
ಅಶ್ವಸೂರ್ಯ/ಹಾಸನ : ಡೆತ್ನೋಟ್ ಬರೆದಿಟ್ಟು ಉಪ ತಹಶಿಲ್ದಾರ್ ಒಬ್ಬರು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿಎಂ ರಸ್ತೆಯ ಖಾಸಗಿ ಲಾಡ್ಜ್ನಲ್ಲಿನಡೆದಿದೆ. ತಿಮಯ್ಯ (52) ಆತ್ಮಹತ್ಯೆ ಮಾಡಿಕೊಂಡ ಉಪ ತಹಶಿಲ್ದಾರ್.
ಮೂಲತಃ ಕೊಡಗು ಜಿಲ್ಲೆಯವರಾದ ತಿಮಯ್ಯ ಅವರು ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ದ್ಯಾವಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷದ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ನಿನ್ನೆ ಬೆಳಿಗ್ಗೆ ಸುಮಾರು 11.30ಕ್ಕೆ ಬಿಎಂ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಕೊಠಡಿಯೊಂದನ್ನು ಬಾಡಿಗೆಗೆ ಪಡೆದಿದ್ದರು.ಸಂಜೆಯಾದರೂ ಕೊಠಡಿ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ kರಾತ್ರಿ ಸುಮಾರು 8.30ರ ವೇಳೆಗೆ ಬಾಗಿಲಿನ ಬೀಗ ಒಡೆದು ಒಳಗೆ ಪ್ರವೇಶಿಸಿದಾಗ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಆತಹತ್ಯೆಗೂ ಮುನ್ನ ತಿಮ್ಮಯ್ಯ ಅವರು ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟಿರುವುದು ಬೆಳಕಿಗೆ ಬಂದಿದೆ.ಡೆತ್ನೋಟ್ನಲ್ಲಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹಾಸನ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.ಡೆತ್ ಕೋಡ್ನಲ್ಲಿ ಏನಿದೆ ಎನ್ನುವುದು ಮಾತ್ರ ನಿಗೂಢವಾಗಿದೆ.


