BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್ ಉಗ್ರರ ಸೆರೆ.
news.ashwasurya.in
ಅಶ್ವಸೂರ್ಯ/ದಾವಣಗೆರೆ, ಜೂ.5 : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಡಗಿಕೊಂಡು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ತುಮಕೂರು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ದಾವಣಗೆರೆಯ ಬಿಡಿ ಲೇಔಟ್ನ ಜಮೀರ್ ಖಾನ್ (22), ತುಮಕೂರಿನ ಅಲ್ಲಾಭಕ್ಷಿ ಬಂಧಿತರು. ಈ ಇಬ್ಬರೂ ಪಾಕ್ನ ಐಎಸ್ಎಸ್ ಫಂಡಿಂಗ್ ಮಾಡುತ್ತಿದ್ದ ಉಗ್ರರಾದ ಶಾಬಾಸ್ ಭುಟ್ಟಿ ಹಾಗೂ ರಾಣಾ ಉನೇನ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.
ಈ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರೂ ಸೇರಿ ದುರಂದರ್ ಶೈಲಿಯಲ್ಲಿ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ.ದುರಂದರ್ ಸಿನಿಮಾದಲ್ಲಿ ಹೇಗೆ ಪಾಕಿಸ್ತಾನದಲ್ಲಿ ಬಾಂಬ್ ಸ್ಟೋಟ ಮಾಡಿದ್ರೋ ಅದೇ ರೀತಿ ಭಾರತದಲ್ಲಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.
ಈ ಇಬ್ಬರನ್ನು ಪಿಐಒಗಳಾಗಿ (ಪಾಕಿಸ್ತಾನ್ ಇಂಟಲಿಜೆನ್ಸ್ ಅಪರೇಟರ್ಸ್) ಉಗ್ರರು ಬಳಕೆ ಮಾಡಿಕೊಂಡಿದ್ದರು.ವಾಟ್ಸಾಪ್, ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಉಗ್ರರ ಸಂಪರ್ಕದಲ್ಲಿದ್ದರು.
ದೇಶದಲ್ಲಿ ಸಂಚು ನಡೆಸಲು ಭಾರತದ ಮುಸ್ಲಿಂ ಯುವಕರನ್ನು ಬಳಕೆ ಮಾಡಿಕೊಂಡು ಐಎಸ್ಎಸ್ ಭಯೋತ್ಪಾದಕ ಸಂಘಟನೆ ವಿಸ್ತರಿಸಲು ಸಂಚು ರೂಪಿಸಿದ್ದರು. ಈಗಾಗಲೇ ಇಬ್ಬರು ಯುವಕರಿಗೆ ಉಗ್ರರು ಮುಂಬೈನಲ್ಲಿ ಉದ್ಯಮಿಯೊಬ್ಬನನ್ನು ಹತ್ಯೆಗೈಯಲು ಟಾಸ್ಕ್ ನೀಡಿದ್ದರು. ಅಷ್ಟರೊಳೊಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


