Headlines

ದಾವಣಗೆರೆ : ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ಅಶ್ವಸೂರ್ಯ/ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರೂರ ಘಟನೆಯೊಂದು ನಡೆದಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರು, ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿ, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಪತಿಯೊಂದಿಗೆ ಜಗಳವಾಡಿ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ನೆಡೆದಿದೆ ಎನ್ನಲಾಗಿದೆ.
ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ನಡೆದಿದೆ ಎನ್ನಲಾಗಿದ್ದು. 41 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಜೂನ್ 3ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ. ಮಹಿಳೆ ಪತಿ ಜತೆ ಜಗಳವಾಡಿ ತವರಿಗೆ ಹೊರಟ್ಟಿದ್ದರು. ಈ ವೇಳೆ ಹಂದಿ ಬೇಟೆಗೆ ತೆರಳಿದ್ದ ಯುವಕರ ಗ್ಯಾಂಗ್ ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಬಳಿಕ ತೋಟಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿಯಿಂದ ಮುಂಜಾನೆಯವರೆಗೂ ಯುವಕರ ಗುಂಪು ವಿಕೃತಿ ಮೆರೆದಿದ್ದು. ಬಳಿಕ ಬೆತ್ತಲೆ ಫೋಟೊ, ವಿಡಿಯೊ ಮಾಡಿಕೊಂಡು ಆರೋಪಿಗಳು ವಿಕೃತ ಸಂತೋಷಪಟ್ಟಿದ್ದರು. ಅಲ್ಲದೇ ಫೋಟೋ ಹಾಗೂ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಘಟನೆ ಬಳಿಕ ಗ್ರಾಮದಲ್ಲಿ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರವಾಗುತ್ತಿದ್ದಂತೆ ಆರೋಪಿಗಳು ವಿಡಿಯೋ ಡಿಲೀಟ್ ಮಾಡಿದ್ದಾರೆ. ಇತ್ತ ಘಟನೆ ಸಂಬಂಧ ಸಂತ್ರಸ್ತೆ ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಹಾಗೂ ಮಧು ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿಗಳೆಲ್ಲ ಯಲೋದಹಳ್ಳಿಯವರಾಗಿದ್ದಾರೆ.
ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯ ಬಸವಪಟ್ಟಣ ಪೊಲೀಸ್ ಠಾಣೆಯಿಂದ ಆರೋಪಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!