

ಎಂತಹ ಪ್ರೀ ಪ್ಲಾನ್ ಮರ್ಡರ್.! ಪ್ರಿ ವೆಡ್ಡಿಂಗ್ ಫೋಟೋಶೂಟ್.! ಆಮೇಲೆ ನಡೆದದ್ದು ವರನ ಹತ್ಯೆ.! 400 ಅಡಿ ಕಂದಕಕ್ಕೆ ತಳ್ಳಿ ವರನ ಕೊಂದೆ ಬಿಟ್ಲಾ ಕಿರಾತಕಿ ವಧು..!

news.ashwasurya.in
ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ(Lohagad Fort) ಜೂನ್ 18 ರಂದು ನಡೆದಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್(Ketan Vishal Agarwal) ಅವರ ನಿಗೂಢ ಸಾವು ಇದೀಗ ಭೀಕರ ಕೊಲೆ (Murder) ಪ್ರಕರಣ ವೆಂದು ಬಯಲಾಗಿದೆ.!
ಈಗ ಪುಣೆ ಗ್ರಾಮಾಂತರ ಪೊಲೀಸರು ಕೇತನ್ ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಕೊಲೆ ಆರೋಪದ ಮೇಲೆ ಬಂಧಿಸಿ ಜೈಲಿಗಟ್ಟಿದ್ದಾರೆ.

ಎನಿದು ಪ್ರಕರಣ.?
ಜೂನ್ 19 ರಂದು ಸಿಯಾ ಗೋಯಲ್ ಹುಟ್ಟುಹಬ್ಬವಿತ್ತು. ಇದರ ಮುನ್ನಾದಿನ ಅಂದರೆ ಜೂನ್ 18 ರಂದು ಬೆಳಿಗ್ಗೆ, ಭಾವಿ ಪತ್ನಿಯ ಬರ್ತ್ಡೇ ಆಚರಣೆ ಹಾಗೂ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ಗಾಗಿ ಕೇತನ್ ಮತ್ತು ಸಿಯಾ ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಬಂದಿದ್ದರು. ಕೋಟೆಯ ತುದಿಯಲ್ಲಿ ಬೆಳಿಗ್ಗೆ 10:30ರ ಸುಮಾರಿಗೆ ಫೋಟೋ ತೆಗೆದುಕೊಳ್ಳುವಾಗ ತೀವ್ರ ಗಾಳಿಗೆ ಕೇತನ್ ಆಯತಪ್ಪಿ 400 ಅಡಿ ಆಳದ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಆರಂಭದಲ್ಲಿ ಬಿಂಬಿಸಲಾಗಿತ್ತು. ಪೊಲೀಸರು ಕೂಡ ಇದನ್ನು ಆಕಸ್ಮಿಕ ಸಾವು (Accidental Death) ಎಂದು ಪ್ರಕರಣ ದಾಖಲಿಸಿದ್ದರು.
ಇದು ಕೊಲೆ ಎಂದು ಅನುಮಾನ ಬರಲು ಕಾರಣ.!?
ಪೊಲೀಸರು ತನಿಖೆ ಮುಂದುವರಿಸಿದಾಗ ಸಿಯಾ ನೀಡುತ್ತಿದ್ದ ಹೇಳಿಕೆಗಳಲ್ಲಿ ಅನುಮಾನ ಮೂಡಿದೆ. ನಂತರ ಆಕೆಯ ಮೊಬೈಲ್ ಕರೆಗಳ ವಿವರ, ಸಾಮಾಜಿಕ ಜಾಲತಾಣಗಳ ಚಟುವಟಿಕೆ ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಿದಾಗ ನೀಚಾ ಮಹಿಳೆಯ ಕರಾಳ ಸತ್ಯ ಬಯಲಾಗಿದೆ.
ಸಿಯಾಳಿಗೆ ಮನೆಯವರು ನಿಶ್ಚಯಿಸಿದ್ದ ಕೇತನ್ ಜೊತೆ ಮದುವೆಯಾಗಲು ಇಷ್ಟವಿರಲಿಲ್ಲ. ತಾನು ಪ್ರೀತಿಸುತ್ತಿದ್ದ ಚೇತನ್ ಚೌಧರಿ ಜೊತೆ ಬಾಳಲು ಕೇತನ್ ಅಡ್ಡಿಯಾಗಿದ್ದಾನೆಂದು ಭಾವಿಸಿ ಇಬ್ಬರೂ ಸೇರಿ ಈ ಕೊಲೆಗೆ ಸಂಚು ರೂಪಿಸಿದ್ದರು. ಕೋಟೆಯ ತುದಿಗೆ ಬಂದಾಗ ಸಿಯಾ ತನ್ನ ಪ್ರಿಯಕರ ಚೇತನ್ನನ್ನು ರಹಸ್ಯವಾಗಿ ಅಲ್ಲಿಗೆ ಕರೆಸಿಕೊಂಡಿದ್ದಳು. ಬಳಿಕ ಇಬ್ಬರೂ ಸೇರಿ ಕೇತನ್ನನ್ನು ಕಂದಕಕ್ಕೆ ತಳ್ಳಿದ್ದಾರೆ.

ಮೋದಲ ಪ್ರಯತ್ನದಲ್ಲಿ ವಿಫಲ.! ಎರಡನೇ ಪ್ರಯತ್ನದಲ್ಲಿ ಸಫಲ.! :
ಪೊಲೀಸ್ ಮೂಲಗಳ ಪ್ರಕಾರ, ಕೇತನ್ನನ್ನು ಕೊಲ್ಲಲು ಸಿಯಾ ಮತ್ತು ಚೇತನ್ ಚೌಧರಿ ನಡೆಸಿದ ಎರಡನೇ ಪ್ರಯತ್ನ ಇದಾಗಿತ್ತು. ಜೂನ್ 14 ರಂದೂ ಇದೇ ಕೋಟೆಗೆ ಕೇತನ್ನನ್ನು ಕರೆತಂದು ಹಾವಿನ ಭಯ ಹುಟ್ಟಿಸಿ ಕಂದಕಕ್ಕೆ ತಳ್ಳಲು ಯತ್ನಿಸಿದ್ದರು ಆದರೆ ಅದು ವಿಫಲವಾಗಿತ್ತು.
ಮದುವೆಗೂ ಮುನ್ನ ಇವರಿಬ್ಬರೂ ಇಂಡೋನೇಷ್ಯಾದ ಬಾಲಿ ಪ್ರವಾಸಕ್ಕೆ ತೆರಳಲು ವಿಮಾನ ಹಾಗೂ ಹೋಟೆಲ್ ಬುಕ್ಕಿಂಗ್ ಮಾಡಿದ್ದರು. ಆದರೆ ಪ್ರವಾಸಕ್ಕೆ ಹೊರಡುವ ದಿನವೇ ಹೋಟೆಲ್ ಒಂದರ ಶೌಚಾಲಯದಲ್ಲಿ ಸಿಯಾ ತನ್ನ ಪಾಸ್ಪೋರ್ಟ್ ಅನ್ನು ಹರಿದು ಹಾಕಿ, ಪಾಸ್ಪೋರ್ಟ್ ಕಳೆದುಹೋಗಿದೆ ಎಂದು ನಾಟಕವಾಡಿ ಪ್ರವಾಸ ರದ್ದಾಗುವಂತೆ ಮಾಡಿದ್ದಳು ಎಂಬ ಆಘಾತಕಾರಿ ವಿಷಯವನ್ನು ಕೇತನ್ ಕುಟುಂಬಸ್ಥರು ಬಹಿರಂಗಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಕೇತನ್ ಮತ್ತು ಸಿಯಾ ವಿವಾಹ ಈ ವರ್ಷದ ನವೆಂಬರ್ನಲ್ಲಿ ನಿಗದಿಯಾಗಿತ್ತು. ಈ ಸಂಬಂಧ ಕುಟುಂಬಗಳು ರಾಜಸ್ಥಾನದ ಅರಮನೆಯೊಂದರಲ್ಲಿ ಅದ್ಧೂರಿ ಮದುವೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದವು.
ಈಗ ಅಪಘಾತ ಎಂದು ನಂಬಿದ್ದ ಮಗನ ಸಾವು, ಮದುವೆಯಾಗಬೇಕಿದ್ದ ಹುಡುಗಿಯಿಂದಲೇ ನಡೆದ ಕ್ರೂರ ಕೊಲೆ ಎಂದು ತಿಳಿದು ಬಂದಿರುವುದು ಕೇತನ್ ಕುಟುಂಬವನ್ನು ತೀವ್ರ ಆಘಾತಕ್ಕೀಡು ಮಾಡಿದೆ. ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆದಿರುವ ಪುಣೆ ಗ್ರಾಮಾಂತರ ಪೊಲೀಸರು ಇಬ್ಬರು ಅಪರಾಧಿಗಳನ್ನು ತೀವ್ರ ತನಿಖೆ ಒಳಪಡಿಸಿದ್ದು ಇನ್ನಷ್ಟು ಆಘಾತಕಾರಿ ಸಂಗತಿಗಳು ಬಯಲಾಗಲಿದೆ.


