ಉಡುಪಿ : 70 ಲಕ್ಷ ವಂಚನೆ ಪ್ರಕರಣ! ಮೋಸ ಹೋದವರಿದ್ದರೆ ಪೊಲೀಸ್ ಠಾಣೆ ಸಂಪರ್ಕಿಸಲು ಎಸ್ಪಿ ಸೂಚನೆ.
news.ashwasurya.in
ಅಶ್ವಸೂರ್ಯ/ಉಡುಪಿ : ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ 70 ಲಕ್ಷ ಪಡೆದು ವಂಚನೆ ನಡೆಸಿ ಬಳಿಕ ಹಣ ವಾಪಸ್ ಕೇಳಿದ ಉದ್ಯಮಿಗೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಉಡುಪಿ ಎಸ್ಪಿ ಹರಿರಾಂ ಶಂಕರ್ ಅವರು ಆರೋಪಿಯ ವಿರುದ್ಧ ಈಗಾಗಲೇ 6 ರಿಂದ 7 ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಇದೇ ಮಹಿಳೆಯಿಂದ ಇನ್ನೂ ಯಾರಾದರೂ ವಂಚನೆಗೆ ಒಳಗಾಗಿದ್ದರೆ, ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಸಂಪರ್ಕಿಸಿ ಪ್ರತ್ಯೇಕ ದೂರು ದಾಖಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಅಂತಹ ದೂರುಗಳ ಆಧಾರದ ಮೇಲೆ ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.


