
ವೈದ್ಯ ಪತಿಯನ್ನು ಕೊಲೆ ಮಾಡಿದ ಪತ್ನಿ.!ನಂತರ ಮಗನ ಮೇಲು ಚಾಕುವಿನಿಂದ ಹಲ್ಲೆ ನಡೆಸಿ ಹಂತಕಿ.!
news.ashwasurya.in
ಅಶ್ವಸೂರ್ಯ/ದಾರವಾಡ : ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ನಿಗೂಢವಾಗಿದೆ.?

ಧಾರವಾಡ, ಜು. 15: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ ಕರ್ನಾಟಕ ವಿವಿ ರಸ್ತೆಯ ರಂಕಾ ಸ್ಟೆಲ್ಲೊ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದ ವೈದ್ಯ ದಂಪತಿಗಳ ನಡುವೆ ಅದ್ಯಾವ ಕಾರಣಕ್ಕೆ ಗಲಾಟೆಯಾಗಿದೆ ಗೊತ್ತಿಲ್ಲ ಕಿರಣ್ ಅವರನ್ನು ಪತ್ನಿ ಡಾ. ಪ್ರಿಯಾ ಹತ್ಯೆ ಮಾಡಿದ್ದು, ಪೊಲೀಸರು ಆರೋಪಿ ವೈದ್ಯೆಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದು, ಸದ್ಯ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ʼʼಹಲ್ಲೆ ವೇಳೆ 10 ವರ್ಷದ ಮಗನಿಗೂ ಚೂರಿ ಇರಿಯಲಾಗಿದೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆʼʼ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ. ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪತಿ ಮತ್ತು ಪುತ್ರನ ಮೇಲೆ ಹಲ್ಲೆ ನಡೆಸಿದ ಬಳಿಕ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಘಟನೆ ಮಂಗಳವಾರ (ಜುಲೈ 14) ರಾತ್ರಿಯೇ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಮತ್ತು ಪ್ರಿಯಾ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪತಿಯನ್ನು ಒಂದು ಕೋಣೆಯಲ್ಲಿ ಕೊಂದ ಬಳಿಕ ಪ್ರಿಯಾ ಮತ್ತೊಂದು ಕೋಣೆಯಲ್ಲಿದ್ದ 10 ವರ್ಷದ ಮಗನ ಮೇಲೆ ಚಾಕುವಿನಿಂದ ಮನಬಂದಂತೆ ಇರಿದಿದ್ದಾಳೆ. ರಕ್ತದ ಮಡುವಿನಲ್ಲಿ ಉಸಿರಾಡಲು ಒದ್ದಾಡುತ್ತಿದ್ದ ಮಗುವಿನ ಪಕ್ಕದಲ್ಲೇ ಕುಳಿತು ಈಕೆ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು ಎನ್ನುವ ಬೆಚ್ಚಿ ಬೀಳಿಸುವ ಅಂಶವೂ ಬೆಳಕಿಗೆ ಬಂದಿದೆ.

ಘಟನೆ ಗೊತ್ತಾದ ತಕ್ಷಣ ಧಾವಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಗು ಉಸಿರಾಡುತ್ತಿರುವುದನ್ನು ಗಮನಿಸಿ ತಕ್ಷಣವೇ ತಾವೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕೆ ಡಾ. ಕಿರಣ್ ಅವರ ಸಹೋದರಿಯರು ಧಾವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಾರ್ಟ್ಮೆಂಟ್ನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.ಇನ್ನಷ್ಟೇ ಕೊಲೆಗೆ ಕಾರಣವೇನು ಎನ್ನುವ ಸತ್ಯ ಬಯಲಾಗಬೇಕಿದೆ.


