ಬಿಜೆಲಿ ರಾಜ್ಯ ಘಟಕದ ನೂತನ ಅಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಸಚಿವ ಸಿ ಟಿ ರವಿ
ವಿಜಯೇಂದ್ರರನ್ನು ಭೇಟಿಯಾದ ಸಿ ಟಿ ರವಿ! ಹಾರ ಹಾಕಿ, ಶಾಲು ಹೊದಿಸಿ ಅಪ್ಪಿಕೊಂಡು ಶುಭಕೋರಿದ ಮಾಜಿ ಸಚಿವ
News.Ashwasurya.in
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಮಾಜಿ ಸಚಿವ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಅದು ಕೈತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದಾರೆ ಎಂದು ಕೇಳಿಬರುತ್ತಿದ್ದ ಸುದ್ದಿಯ ಬೆನ್ನಿಗೆ ಸಿ.ಟಿ.ರವಿ ಸೋಮವಾರ ವಿಜಯೇಂದ್ರ ಅವರ ನಿವಾಸಕ್ಕೆ ಆಗಮಿಸಿ ನೂತನ ಅಧ್ಯಕ್ಷರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಒಪ್ಪಿಕೊಂಡಿದ್ದಾರೊ ಇಲ್ಲವೋ ಒಟ್ಟಿನಲ್ಲಿ ಅವರನ್ನು ಅಪ್ಪಿಕೊಂಡು ಶುಭಕೋರಿದ್ದಾರೆ. ಇದರ ಫೋಟೋಗಳನ್ನು ವಿಜಯೇಂದ್ರ ಅವರು ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಧನ್ಯವಾದ ತಿಳಿಸಿದ್ದಾರೆ.
ಇಂದು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಶ್ರೀ ಸಿ.ಟಿ.ರವಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ, ಅವರ ಸಲಹೆ ಹಾಗೂ ಮಾರ್ಗದರ್ಶನ ಕೋರಲಾಯಿತು ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಟಿ.ರವಿ ಅವರು ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆಗೊಂಡಿದ್ದರು ಎನ್ನಲಾಗಿತ್ತು. ಇವರ ಜೊತೆಗೆ ಆಕಾಂಕ್ಷಿಗಳಾಗಿದ್ದ ವಿ.ಸೋಮಣ್ಣ, ಅರವಿಂದ್ ಬೆಲ್ಲದ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.
ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಬೇಸರವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಸಿ.ಟಿ.ರವಿ ಕೊನೆಗೂ ವಿಜಯೇಂದ್ರರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ಇದರ ನಡುವೆ ಅಸಮಾಧಾನಿತ ನಾಯಕರನ್ನು ಸಮಾಧಾನ ಪಡಿಸುವ ಕಾರ್ಯವನ್ನು ರಾಜಹುಲಿ ಬಿ.ಎಸ್.ಯಡಿಯೂರಪ್ಪನವರು ಮಾಡುತ್ತಿದ್ದಾರೆ ಎನ್ನಲಾಗಿದೆ. ಕುಳಿತಲ್ಲೆ ತಮ್ಮ ಶಕ್ತಿ
ತೊರುತ್ತಿರುವ ಬಿಎಸ್ವೈ ಮುನಿಸಿಕೊಂಡವರಿಗೆಲ್ಲ ಫೋನ್ ಕರೆ ಮಾಡಿ ಪಕ್ಷ ಸಂಘಟನೆಗೆ ಒಗ್ಗಟ್ಟಾಗಿರೋಣ ಎಂಬ ಸಂದೇಶವನ್ನು ರವಾನಿಸುತ್ತಿದ್ದಾರೆ. ಒಟ್ಟಿನಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಮಗನ ಅಧ್ಯಕ್ಷತೆಯಲ್ಲಿ ಹೆಚ್ಚು ಸ್ಥಾನ ಗೆದ್ದು ಬಿಜಿಪಿ ವರಿಷ್ಠರಿಂದ ಸೈ ಎನ್ನಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಎಲ್ಲಾ ಪ್ರಯತ್ನಗಳು ಬಿ ಎಸ್ ಯಡಿಯೂರಪ್ಪ ನವರಿಂದ ಆಗುತ್ತದೆ ಎನ್ನುವುದು ಸತ್ಯ. ಕರ್ನಾಟಕದಲ್ಲಿ ಬಿಜೆಪಿಯ ಬಿಗ್ ಬಾಸ್ ಯಡಿಯೂರಪ್ಪ ನವರೆ ಎನ್ನುವುದು ಮತ್ತೊಮ್ಮೆ ಸಾಭಿತಾಗಿದೆ.
ಸುಧೀರ್ ವಿಧಾತ, ಶಿವಮೊಗ್ಗ