ಪ್ರವೀಣ್ ಅರುಣ್ ಚೌಗಲೆ
ಉಡುಪಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕ್ರೂರ ನೇಜಾರು ಹತ್ಯೆ ಪ್ರಕರಣದ ಆರೋಪಿಯನ್ನು ಮಂಗಳವಾರ ಬೆಳಗಾವಿಯ ಕುಡಚಿಯಲ್ಲಿ ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನಿವಾಸಿ ಪ್ರವೀಣ್ ಚೌಗಲೆ (35) ಎಂದು ಗುರುತಿಸಲಾಗಿದೆ.
ಆರೋಪಿಯು ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಪರಾರಿಯಾಗುವ ಯತ್ನದ ಸಮಯದಲ್ಲಿ, ಅವರು ಕುಡಚಿಯಲ್ಲಿ ತಮ್ಮ ಮೊಬೈಲ್ ಫೋನ್ ಅನ್ನು ಸ್ವಿಚ್ ಆನ್ ಮಾಡಿದ್ದಾರೆ ಎಂದು ವರದಿಯಾಗಿದೆ, ಇದು ಉಡುಪಿ ಪೊಲೀಸರಿಗೆ ಅವನನ್ನು ಪತ್ತೆಹಚ್ಚಲು ಅನುವು ಮಾಡಿಕೊಟ್ಟಿತು, ನಂತರ ಅವರನ್ನು ಬಂಧಿಸಲು ಕಾರಣವಾಯಿತು.
ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ ಬಂಧನ. ಹತ್ಯೆಗೆ ಕಾರಣವೇನು?
ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ. ಇತನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಉಡುಪಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಯಶಸ್ವಿಯಾಗಿದ್ದಾರೆ.
ಪ್ರವೀಣ್ ಅರುಣ್ CISF ಸಿಬ್ಬಂದಿಯಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದನಂತೆ. ಇನ್ನೂ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಅಯ್ನಾಜ್ ಗೆ ಪ್ರವೀಣ್ ಪರಿಚಯವಾಗಿತ್ತು. ಇಬ್ಬರು ಪರಸ್ಪರ ಆತ್ಮೀಯರಾಗಿದ್ದರಂತೆ! ಅ ನಂತರದಲ್ಲಿ ಅಯ್ನಾಜ್ ಆತನಿಂದ ದೂರವಾಗಿದ್ದಳು. ಇದರಿಂದ ಕುಪಿತನಾಗಿದ್ದ ಪ್ರವೀಣ್ ಆಕೆಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ಅಯ್ನಾಜ್ ಳಿಗೆ ಚೂರು ಇರಿಯುತ್ತಿದ್ದಾಗ ಆಕೆಯನ್ನು ರಕ್ಷಿಸಲು ಬಂದ ತಾಯಿ, ಸಹೋದರಿಗೂ ಪ್ರವೀಣ್ ಚೂರಿ ಇರಿದಿದ್ದಾನೆ. ಇನ್ನೂ ಮನೆಯಲ್ಲಿ ಗಲಾಟೆಯಾಗುತ್ತಿದ್ದುದ್ದನ್ನು ಗಮನಿಸಿದ ಅಸೀಮ್ ಮನೆಗೆ ಓಡಿ ಬಂದಿದ್ದಾನೆ. ಈ ವೇಳೆ ಅಸೀಮ್ ಗೂ ಚೂರಿ ಇರಿದು ಪ್ರವೀಣ್ ಅಲ್ಲಿಂದ ಪರಾರಿಯಾಗಿದ್ದ;
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇನ್ನೂ ಆರೋಪಿ ಉಡುಪಿಗೆ ಬಂದಿದ್ದು ಕೆಲ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಾಲ್ವರ ಬರ್ಬರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಡುಪಿ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಬೆಳಗಾವಿಯಿಂದ ಮತ್ತೆ ಉಡುಪಿಗೆ ಕರೆತರಲಾಗುತ್ತಿದೆ. ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದಲ್ಲಿ ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.
ಭಾನುವಾರ ಬೆಳಿಗ್ಗೆ ಸಂತ್ರಸ್ತರಾದ ಹಸೀನಾ (42) ಮತ್ತು ಆಕೆಯ ಮಕ್ಕಳಾದ ಅಫ್ನಾನ್ (22), ಐನಾಜ್ (20), ಮತ್ತು ಆಸಿಮ್ (12) ಅವರನ್ನು ಆರೋಪಿಗಳು ಬರ್ಬರವಾಗಿ ಇರಿದು ಕೊಂದಿದ್ದಾರೆ. ಹಸೀನಾ ಅವರ ಅತ್ತೆ ಹಾಜಿರಾ ಅವರ ಮೇಲೂ ಹಲ್ಲೆ ನಡೆದಿದ್ದು, ಶೌಚಾಲಯಕ್ಕೆ ಬೀಗ ಹಾಕಿಕೊಂಡು ಬದುಕುಳಿದಿದ್ದಾರೆ.
ಸುಧೀರ್ ವಿಧಾತ , ಶಿವಮೊಗ್ಗ