Headlines

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.!

news.ashwasurya.in

ಅಶ್ವಸೂರ್ಯ/ ಕುಂದಾಪುರ: ಕರಾವಳಿ ಕುಂದಾಪುರದಲ್ಲಿ ಮುಂಜಾನೆಯೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಿಗ್ಗೆ 3.30 ರ ಸುಮಾರಿಗೆ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ.

ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದ ವ್ಯಕ್ತಿ.
ಪ್ರಕರಣದ ವಿವರ : ತಮ್ಮದೆಯಾದ ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ.ಹಂತಕರು ರಿವಲ್ವಾರ್ ಮೂಲಕ ಆರೋಪಿ ಐವನ್ ಅವರಿಗೆ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಉಸಿರು ಚಲ್ಲಿದ್ದಾರೆ.ಐವಾನ್ ಜೋತೆಗೆ ಕಾರಿನಲ್ಲಿದ್ದ ಮಹಿಳೆ ಆರೋಪಿಯ ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರ್ಯಾವುದೇ ವ್ಯವಹಾರ ಸಂಬಂಧಪಟ್ಟ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ.

ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಹತ್ಯೆ ನೆಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯ ಬಂಧನಕ್ಕಾಗಿ ಪೊಲೀಸರು ಭಲೇ ಬಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!