Headlines

ಬೆಂಗಳೂರು : ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ.!ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌ : ಆರೋಗ್ಯ ಸಚಿವರ ಮಹತ್ವದ ಘೋಷಣೆ.

ಇನ್ನು ಮುಂದೆ ಪಿಜಿಗಳು, ಹಾಸ್ಟೆಲ್‌ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್‌ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಯುಟಿ ಖಾದರ್ ತಿಳಿಸಿದ್ದಾರೆ.
ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದ್ದಾರೆ…

ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಳೆದ ಕೆಲವು ದಿನಗಳಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಆಹಾರ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದು, ಪಿಜಿಗಳು ಮತ್ತು ಖಾಸಗಿ ಹಾಸ್ಟೆಲ್ ಗಳನ್ನು ಕೂಡ ಪರಿಶೀಲನೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್‌ ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಕರ್ತವ್ಯ ಪ್ರಜ್ಞೆ ಮೆರೆದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಇಂದು ಆರೋಗ್ಯ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಧಿಕಾರಿಗಳಿಗೆ ಗೌರವ ಸಮರ್ಪಣೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವರು, ಹಲವು ವಿಷಯಗಳನ್ನ ಪ್ರಸ್ತಾಪಿಸಿದರು.

ಇನ್ನು ಮುಂದೆ ಪಿಜಿಗಳು, ಹಾಸ್ಟೆಲ್‌ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್‌ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಖಾದರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!