ಬೆಂಗಳೂರು : ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆ ಅವರನ್ನು ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ.
ರಾಜ್ಯದ ಜನರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ವಿಶ್ವಾಸ…
ಅಶ್ವಸೂರ್ಯ/ಬೆಂಗಳೂರು :ಕರ್ನಾಟಕ ಗೃಹ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶ್ರೀನಿವಾಸ ಮಾನೆ ಅವರು ಇಂದು ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರು ಶ್ರೀನಿವಾಸ ಮಾನೆ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭ ಹಾರೈಸಿದರು.
ಕರ್ನಾಟಕ ಗೃಹ ಮಂಡಳಿಯು ರಾಜ್ಯದ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸುವುದು, ವಸತಿ ಯೋಜನೆಗಳ ಅನುಷ್ಠಾನ, ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಸುಸಜ್ಜಿತ ಬಡಾವಣೆಗಳ ನಿರ್ಮಾಣ ಸೇರಿದಂತೆ ಮಹತ್ವದ ಕಾರ್ಯಗಳನ್ನು ನಿರ್ವಹಿಸುತ್ತಿದೆ.
ಜನಪರ ಕಾಳಜಿ, ಕ್ಷೇತ್ರದ ಅಭಿವೃದ್ಧಿಯ ಬದ್ಧತೆ ಹಾಗೂ ಸಾರ್ವಜನಿಕ ಬದುಕಿನ ಅನುಭವ ಹೊಂದಿರುವ ಶ್ರೀನಿವಾಸ ಮಾನೆ ಅವರು ಗೃಹ ಮಂಡಳಿಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ರಾಜ್ಯದ ಜನರಿಗೆ ಉತ್ತಮ ವಸತಿ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಸಚಿವ ಮಧು ಬಂಗಾರಪ್ಪ ವ್ಯಕ್ತಪಡಿಸಿದರು.
ಭೇಟಿಯ ಸಂದರ್ಭದಲ್ಲಿ ಇಬ್ಬರೂ ನಾಯಕರು ರಾಜ್ಯದ ಅಭಿವೃದ್ಧಿ, ಜನಪರ ಯೋಜನೆಗಳು ಹಾಗೂ ವಿವಿಧ ಸಮಕಾಲೀನ ವಿಷಯಗಳ ಕುರಿತು ಚರ್ಚಿಸಿದರು.
ಸಚಿವರ ಅಭಿನಂದನೆ ಹಾಗೂ ಶುಭ ಹಾರೈಕೆಗಳಿಗೆ ಶ್ರೀನಿವಾಸ ಮಾನೆ ಅವರು ಕೃತಜ್ಞತೆ ಸಲ್ಲಿಸಿದರು.


