ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ.
news.ashwasurya.in
ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಈ ವಿಷಯ ಬೆಳಕಿಗೆ ಬರುತ್ತಿದ್ದಹಾಗೆ ಪೋಲಿಸ್ ಇಲಾಖೆಯೆ ಬೆಚ್ಚಿಬಿದ್ದಿದೆ…
ಅಶ್ವಸೂರ್ಯ/ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ದಂಗು ಬಡಿಯುವಂತೆ ಮಾಡಿದೆ.
ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಅಲ್ಲದೇ ಪೊಲೀಸ್ ಇಲಾಖೆಯನ್ನೇ ಮುಜುಗರಕ್ಕೀಡು ಮಾಡಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಡಿಯೋದಲ್ಲಿರುವ ಮಹಿಳಾ ಪೊಲೀಸ್ ಅಧಿಕಾರಿ ದೂರು ದಾಖಲಿಸಿದ್ದಾರೆ. ವಿಡಿಯೋ ವೈರಲ್ ಮಾಡಿದ ಇಬ್ಬರ ವಿರುದ್ಧ ಮಹಿಳಾಧಿಕಾರಿ, ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.


