Headlines

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣ,3ನೇ ಆರೋಪಿಯ ಬಂಧನ.! ಯಾರು ಈ ರಿತೇಶ್?

ಮೂರನೇ ಆರೋಪಿ ರಿತೇಶ್‌ನನ್ನು ಬಂಧಿಸಿ ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ…..

ಅಶ್ವಸೂರ್ಯ/ಪುಣೆ: ಮಹಾರಾಷ್ಟ್ರದ ಪುಣೆಯ ಲೋಹಗಢ ಕೋಟೆಯಲ್ಲಿ ನಡೆದಿದ್ದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್ ದೊರೆತಿದ್ದು, ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ಕೆತನ್ ಅಗರ್ವಾಲ್ ಅವರನ್ನು ಲೋಹಗಢ ಕೋಟೆಯಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಆಕೆಯ ಬಾಯ್‌ಫ್ರೆಂಡ್ ಚೇತನ್ ಚೌಧರಿ ಬಂಧನದ ಬಳಿಕ ಇದೀಗ ಮೂರನೇ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಪ್ರಕರಣದ ಆರೋಪಿ ಹಾಗೂ ಸಿಯಾ ಗೋಯಲ್ ಪ್ರಿಯತಮ ಚೇತನ್ ಚೌಧರಿಯ ಸ್ನೇಹಿತ ರಿತೇಶ್ ಹಂಗೆನನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆತನ್ ಅಗರ್ವಾಲ್ ಕೊಲೆಯ ಸಂಚು ರೂಪಿಸುವಲ್ಲಿ ಆತ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಮೂರನೇ ಆರೋಪಿ ರಿತೇಶ್‌ನನ್ನು ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!