ದಾವಣಗೆರೆಯಲ್ಲಿ ಗ್ಯಾಂಗ್ ವಾರ್.: ಎರಡು ಗುಂಪಿನ ನಡುವೆ ಮಾರಾಮಾರಿ.! ತಲ್ವಾರ್ ಹಿಡಿದು ನಡುರಸ್ತೆಯಲ್ಲೇ ಯುವಕರ ಬಡಿದಾಟ ಐವರು ಆಸ್ಪತ್ರೆಗೆ ದಾಖಲು.

news.ashwasurya.in
ಅಶ್ವಸೂರ್ಯ/ದಾವಣಗೆರೆ : ದಾವಣಗೆರೆಯಲ್ಲಿ ಎರಡು ಗ್ಯಾಂಗಿನ ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಈ ಘಟನೆ ದಾವಣಗೆರೆಯ ಬಿ.ಡಿ. ಲೇಔಟ್ನಲ್ಲಿ ನೆಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ಏಕಾಏಕಿ ವಿಕೋಪಕ್ಕೆ ತಿರುಗಿದ್ದು, ನಡುರಸ್ತೆಯಲ್ಲೇ ಯುವಕರು ತಲ್ವಾರ್ ಹಾಗೂ ದೊಣ್ಣೆ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ದಾವಣಗೆರೆ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಗರದ ಬಿ.ಡಿ. ಲೇಔಟ್ ನಿವಾಸಿಗಳಾದ ಮೈನು, ಜುನೇದ್, ಇರ್ಫಾನ್ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ ಮಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು ಈ ಘಟನೆಗೆ ಸಂಭಂದಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ಧ ದೂರು ದಾಖಲಾಗಿದೆ.


